ನಿರಂತರ ಮಳೆಗೆ ತತ್ತರಿಸಿರುವ ಉತ್ತರಾಖಂಡದ ಚಮೋಲಿಯಲ್ಲಿ ಇಂದು ಭಾರೀ ಭೂಕುಸಿತ ಸಂಭವಿಸಿದ್ದು, ಭೂಕುಸಿತದಿಂದ ರಸ್ತೆಯ ಇಕ್ಕೆಲಗಳಲ್ಲಿ ನೂರಾರು ಜನರು ಹಾಗೂ ವಾಹನಗಳು ಸಿಲುಕಿಕೊಂಡಿವೆ. ಮುಂಜಾಗ್ರತಾ ಕ್ರಮವಾಗಿ ಬದರಿನಾಥ್ ಹೆದ್ದಾರಿಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಭೂಕುಸಿತದಿಂದ ರಸ್ತೆಯ ಇಕ್ಕೆಲಗಳಲ್ಲಿ ನೂರಾರು ಜನರು ಹಾಗೂ ವಾಹನಗಳು ಸಿಲುಕಿಕೊಂಡಿವೆ. ಭೂಕುಸಿತ ಸಂಭವಿಸಿರುವ ಸ್ಥಳದಲ್ಲಿ ಅಧಿಕಾರಿಗಳು ರಕ್ಷಣಾ ಕಾರ್ಯ ಕೈಗೊಂಡಿದ್ದು ತಡರಾತ್ರಿ ವೇಳೆಗೆ ರಸ್ತೆ ತೆರೆಯುವ ಸಾಧ್ಯತೆ ಇದೆ. ಕಳೆದ ಕೆಲವು ದಿನಗಳಿಂದ ಉತ್ತರಾಖಂಡದ ಕೆಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಬೆಟ್ಟಗಳಲ್ಲಿ ಭೂಕುಸಿತಗಳು ಉಂಟಾಗಿದ್ದು, ಬದರಿನಾಥಕ್ಕೆ ಹೋಗುವ ಹೆದ್ದಾರಿಯು ಕಲ್ಲುಮಣ್ಣುಗಳಿಂದ ಮುಚ್ಚಿದ್ದು ಹಲವಾರು ಸ್ಥಳಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.