- ಉತ್ತರಾಖಂಡದಲ್ಲಿ ಭಾರಿ ಮಳೆಗೆ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
- ಭೂಕುಸಿತ ಸಂಭವಿಸಿರುವುದರಿಂದ ಬದರಿನಾಥ-ರಿಷಿಕೇಶ ಹೆದ್ದಾರಿ ಬಂದ್ ಮಾಡಲಾಗಿದೆ.
- ಉತ್ತರಾಖಂಡದ ಹಲವು ಜಿಲ್ಲೆಗಳಲ್ಲಿ ಸೋಮವಾರದವರೆಗೆ ಮಳೆಯಾಗುವ ಸಾಧ್ಯತೆ
ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಲ್ಲಿ ಶುಕ್ರವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಾಖಂಡದ ಹಲವೆಡೆ ಕಟ್ಟಡಗಳಿಗೆ ಹಾನಿಯಾಗಿದ್ದು, 17 ಮಂದಿ ಗಾಯಗೊಂಡಿದ್ದಾರೆ. ಸಿರೋಬಗಢ ಬಳಿ ಭೂಕುಸಿತ ಸಂಭವಿಸಿರುವುದರಿಂದ ಬದರಿನಾಥ-ರಿಷಿಕೇಶ ಹೆದ್ದಾರಿ ಬಂದ್ ಮಾಡಲಾಗಿದೆ. ಇದರಿಂದ ಬದರಿನಾಥ ಮತ್ತು ಕೇದಾರನಾಥಕ್ಕೆ ಹೋಗುವ ಪ್ರಯಾಣಿಕರಿಗೆ ತೊಂದರೆಯಾಗಿದೆ ಎಂದು ಹೇಳಲಾಗುತ್ತಿದೆ.
ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ.. ನಿರಂತರ ಮಳೆಯಿಂದಾಗಿ ರುದ್ರಪ್ರಯಾಗ ಮತ್ತು ಪೌರಿ ಜಿಲ್ಲೆಗಳ ಗಡಿಯಲ್ಲಿರುವ ಸಿರೋಬಗಢ ಬಳಿ ಬೆಟ್ಟದಿಂದ ಕಲ್ಲುಗಳು ಹೆದ್ದಾರಿಗೆ ಕುಸಿಯುತ್ತಿರುವುದರಿಂದ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರಾಖಂಡದ ಹಲವು ಜಿಲ್ಲೆಗಳಲ್ಲಿ ಸೋಮವಾರದವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.