ಉತ್ತರಾಖಂಡದ ಗರ್ವಾಲ್ ಹಿಮಾಲಯ ಶ್ರೇಣಿಯಲ್ಲಿರುವ ಶಿವನ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ ದೇವಾಲಯದಲ್ಲಿ 228 ಕೆ.ಜಿ ಚಿನ್ನ ನಾಪತ್ತೆಯಾಗಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿದ್ದಾರೆ. “ಕೇದಾರನಾಥದಲ್ಲಿ ಚಿನ್ನದ ಹಗರಣ ನಡೆದಿದೆ.
ಕೇದಾರನಾಥದಲ್ಲಿ 228 ಕೆ.ಜಿ ಚಿನ್ನ ನಾಪತ್ತೆಯಾಗಿದೆ. ಈ ಬಗ್ಗೆ ಯಾವುದೇ ವಿಚಾರಣೆ ನಡೆಸಿಲ್ಲ. ಈಗ ಇದಕ್ಕೆ ಯಾರು ಹೊಣೆಯೋ ಅವರು ದೆಹಲಿಯಲ್ಲಿ ಕೇದಾರನಾಥವನ್ನು ನಿರ್ಮಿಸುವುದಾಗಿ ಹೇಳುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ. ದೆಹಲಿಯಲ್ಲಿ ಮತ್ತೊಂದು ಕೇದಾರನಾಥ ದೇಗುಲ ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗುತ್ತಿರುವ ನಡುವೆಯೇ ಅವರ ಈ ಹೇಳಿಕೆ ಬಂದಿದೆ. ದೆಹಲಿಯ ಕೇದಾರನಾಥ ದೇವಾಲಯದ ವಿರುದ್ಧ ಅರ್ಚಕರು ಪ್ರತಿಭಟನೆ ನಡೆಸಿದರು. ಜುಲೈ 10ರಂದು ದೆಹಲಿಯಲ್ಲಿ ನಡೆದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಭಾಗವಹಿಸಿದ್ದರು.
ನಾವೆಲ್ಲರೂ ಸನಾತನ ಧರ್ಮದ ಅನುಯಾಯಿಗಳು, ನಮಗೆ ಪಾಪ ಮತ್ತು ಪುಣ್ಯ ಎಂಬ ವ್ಯಾಖ್ಯಾನವಿದೆ. ದ್ರೋಹವೇ ದೊಡ್ಡ ಪಾಪ. ಉದ್ಧವ್ ಠಾಕ್ರೆ ಅವರು ಮೋಸ ಹೋಗಿದ್ದಾರೆ, ಅವರು ಮಾಡಿದ ದ್ರೋಹದಿಂದ ನಮಗೆಲ್ಲ ನೋವಾಗಿದೆ ಎಂದು ನಾನು ಅವರಿಗೆ ಹೇಳಿದೆ. ಅವರು ಮತ್ತೆ ಮಹಾರಾಷ್ಟ್ರದ ಸಿಎಂ ಆಗುವವರೆಗೆ ನಮ್ಮ ನೋವು ನಿವಾರಣೆಯಾಗುವುದಿಲ್ಲ ಎಂದಿದ್ದಾರೆ.