ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಪತ್ರ ಬರೆದಿರುವ ಅವರು, ಪ್ರಕರಣದಲ್ಲಿ ಯೂನಿಯನ್ ಬ್ಯಾಂಕ್ ಶಾಮೀಲಾಗಿದೆ ಎನ್ನಲಾಗಿದೆ. ಯೂನಿಯನ್ ಬ್ಯಾಂಕ್ ಮತ್ತು ಇತರೆ ಹಣಕಾಸು ಸಂಸ್ಥೆಗಳ ಪಾತ್ರದ ತನಿಖೆಯಾಗಬೇಕು. ನಿಗಮದ ಅಧಿಕಾರಿ ಸಾವಿಗೆ ನ್ಯಾಯ ಸಿಗಬೇಕು. ಸಿಬಿಐ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಸಮಗ್ರ ತನಿಖೆ ಮಾಡಿಸಿ ಹಗರಣದಲ್ಲಿ ಭಾಗಿಯಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.