ರಾಜ್ಯದಲ್ಲಿ ಸದ್ದು ಮಾಡುತ್ತಿರುವ ವಾಲ್ಮೀಕಿ ನಿಗಮದ ಹಗರಣ ಬಗೆದಷ್ಟು ಬಯಲಾಗ್ತಿದೆ. ಹಗರಣದ ಸುಳಿಯಲ್ಲಿ ಸಿಲುಕಿರುವ ಮಾಜಿ ಸಚಿವ ನಾಗೇಂದ್ರ. ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ನಿವಾಸ, ಕಚೇರಿಗಳ ಮೇಲೆ ಇಂದು ಬೆಳ್ಳಂಬೆಳಗ್ಗೆಯಿಂದಲೇ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. 94 ಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಮಾಡಿರುವ ಬಗ್ಗೆ ನಿಗಮದ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಿರಂತರ ಪರಿಶೀಲನೆ ನಡೆಸುತ್ತಿದ್ದಾರೆ. ಇದರ ಜೊತೆಗೆ ಶಾಸಕ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಕರೆದೊಯ್ದಿದ್ದಾರೆ.