ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು 1697 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ.
ಒದನ್ನೂ ಓದಿ: ಹಾಸನಾಂಬೆ ಗರ್ಭಗುಡಿ ಓಪನ್: ನ. 3ಕ್ಕೆ ಜಾತ್ರಾ ಮಹೋತ್ಸವ
ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಗೆಲವು ಸಾಧಿಸಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರು ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಸ್ಥಾನಕ್ಕಾಗಿ ಉಪ ಚುನಾವಣೆ ನಡೆದಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ಗೆದ್ದು ವಿಜಯ ಪತಾಕೆ ಹಾರಿಸಿದೆ.