ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಹೊರವಲಯದಲ್ಲಿ ಟಾಟಾ ಏಸ್ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಬಸ್ ಗುದ್ದಿದ ರಭಸಕ್ಕೆ ಗೂಡ್ಸ್ ಆಟೋ ನಜ್ಜುಗುಜ್ಜಾಗಿದೆ. ದುರ್ಘಟನೆಯಲ್ಲಿ ಟಾಟಾ ಏಸ್ ವಾಹನ ಚಾಲಕ ಮತ್ತು ಬಸ್ ನಿರ್ವಾಹಕನಿಗೆ ಗಾಯವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಾಯಾಳುಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.