- ರೈತರಿಗೆ ಬೀಜ ಗೊಬ್ಬರದ ಕೊರತೆ ಆಗಬಾರದು
- ಕೃಷಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
ವಿಜಯನಗರ : ರೈತರಿಗೆ ಬೀಜ ಗೊಬ್ಬರದ ಕೊರತೆ ಆಗಬಾರದು. ಆದರೆ ನಿಮ್ಮನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ವಿಜಯನಗರದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಆಗಿರುವ ಮಳೆ ಮತ್ತು ಕೃಷಿ ಚಟುವಟಿಕೆಗಳ ಮಾಹಿತಿ ಪಡೆಯುವ ಮೂಲಕ ಮುಖ್ಯಮಂತ್ರಿಗಳು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಆರಂಭಿಸಿದರು. ಸಮಾಧಾನಕರವಾಗಿ ಮಳೆ ಆಗಿದ್ದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ರೈತರಿಗೆ ಅಗತ್ಯವಾದ ಬೀಜ, ರಸಗೊಬ್ಬರ ಇತ್ಯಾದಿ ಅಗತ್ಯಗಳ ಸಂಗ್ರಹದ ಪ್ರಮಾಣ ಎಷ್ಟಿದೆ ಎನ್ನುವ ಕುರಿತಂತೆ ಒಂದೊಂದಾಗಿ ಮಾಹಿತಿ ಪಡೆದು, ಒಮ್ಮೆ ಕೊಟ್ಟ ಬೀಜ ಮೊಳಕೆಯೊಡೆಯದಿದ್ದರೆ ಎರಡನೇ ಸುತ್ತು ಕೂಡ ಬೀಜಗಳನ್ನು ಕಡ್ಡಾಯವಾಗಿ ರೈತರಿಗೆ ವಿತರಿಸಬೇಕು. ರೈತರಿಂದ ದೂರು ಬಂದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಖಚಿತ ಎಂದು ಎಚ್ಚರಿಸಿದರು.
ಬರ ಪರಿಹಾರ 130 ಕೋಟಿ ವಿತರಣೆಯಾಗಿದೆ:
ರಾಜ್ಯ ಸರ್ಕಾರದಿಂದ ನೀಡಿದ ಬರ ಪರಿಹಾರದ ಮೊತ್ತ 130 ಕೋಟಿ ರೂಪಾಯಿಗಳನ್ನು ಸಂಪೂರ್ಣವಾಗಿ ವಿತರಣೆಯಾಗಿದೆ. ಜಿಲ್ಲೆಯಲ್ಲಿ ಯಾವ ಅರ್ಹ ರೈತರಿಗೂ ಬಾಕಿ ಉಳಿಸಿಕೊಂಡಿಲ್ಲ ಎಂದು ಅಧಿಕಾರಿಗಳು ದಾಖಲೆ ಮುಂದಿಟ್ಟು ವಿವರಿಸಿದರು. ಬೆಳೆ ಸಮೀಕ್ಷೆಗಳನ್ನು ವೈಜ್ಞಾನಿಕವಾಗಿ ನಡೆಸಿ ಒಬ್ಬರಿಗೂ ಅನ್ಯಾಯ ಆಗದಂತೆ ಪ್ರತಿಯೊಬ್ಬ ರೈತರಿಗೂ ಡಿಬಿಟಿ ಮೂಲಕ ಒಬ್ಬರಿಗೂ ಬಾಕಿ ಉಳಿಯಂತೆ ಅವರ ಖಾತೆಗಳಿಗೆ ಹಣ ಜಮೆ ಆಗಿರುವುದನ್ನು ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಬೆಳೆ ವಿಮೆ ಸಮರ್ಪಕವಾಗಿ ದೊರಕಿಸಲಾಗಿದೆ. ಅತಿ ಹೆಚ್ಚುಮಳೆಯಿಂದ ಆದ ಹಾನಿ, ನೋಂದಣಿ ಮಾಡಿಕೊಂಡ ಎಲ್ಲಾ ರೈತರಿಗೂ, ಬೆಳೆ ಕಟಾವು ಹೊತ್ತಲ್ಲೂ ಅಗತ್ಯಕ್ಕೆ ತಕ್ಕಂತೆ ಬೆಳೆ ವಿಮೆ ವಿತರಣೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.