ರಾಜ್ಯದಲ್ಲಿ ಉಪಚುನಾವಣೆಗೆ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನ ಫನಲ್ ಮಾಡುವ ಹಂತದಲ್ಲಿವೆ. ಈಗಾಗಲೇ 2 ಕ್ಷೇತ್ರಗಳಾದ ಚನ್ನಪಟ್ಟಣ, ಹಾಗೂ ಸಂಡೂರಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನ ಫೈನಲ್ ಮಾಡಿದೆ. ಶಿಗ್ಗಾಂವಿ ಕ್ಷೇತ್ರದ ಟಿಕೆಟ್ ಮಾತ್ರ ಇನ್ನೂ ಹಾಗೇ ಉಳಿದಿದೆ.
ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ್ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಶಿಗ್ಗಾಂವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದರೆ, ಕಾಂಗ್ರೆಸ್ನಿಂದ ಅಚ್ಚರಿಯ ಅಭ್ಯರ್ಥಿಯನ್ನ ಕಣಕ್ಕಿಳಿಸಲು ಕೈ ನಾಯಕರು ಪ್ಲಾನ್ ಮಾಡಿದ್ದಾರೆ.
ಹೌದು.. ಬೊಮ್ಮಾಯಿ ಪುತ್ರನಿಗೆ ಟಾಂಗ್ ಕೊಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ್ ಕುಲಕರ್ಣಿ ಪುತ್ರಿಗೆ ಶಿಗ್ಗಾಂವಿ ಟಿಕೆಟ್ ನೀಡಲು ಚರ್ಚೆ ನಡೆದಿದೆ ಎನ್ನಲಾಗಿದೆ. ಕೈ ಪಡೆಯಿಂದ ಜಾತಿವಾರು ಲೆಕ್ಕಾಚಾರದ ಆಧಾರದಲ್ಲಿ ಪಂಚಮಸಾಲಿ ಸಮುದಾಯದ ವಿನಯ್ ಕುಲಕರ್ಣಿ ಪುತ್ರಿಯಾದ ವೈಶಾಲಿ ಕುಲಕರ್ಣಿಗೆ ಟಿಕೆಟ್ ಕೊಟ್ಟರೆ ಪಂಚಮಸಾಲಿ ಸಮುದಾಯ ವಿನಯ್ ಕುಲಕರ್ಣಿ ಪರವಾಗಿ ನಿಲ್ಲುವ ಸಾಧ್ಯತೆಯಿದೆ.
ಬೊಮ್ಮಾಯಿ ಪುತ್ರನ ವಿರುದ್ಧ ಬಿಜೆಪಿ ತಳಮಟ್ಟದ ಕಾರ್ಯಕರ್ತರಲ್ಲಿ ಬೇಸರ ಇರುವುದನ್ನೇ ಲಾಭವಾಗಿಸಿಕೊಳ್ಳಲು ಕೈ ಪಡೆ ಪ್ಲಾನ್ ಮಾಡಿದೆ ಎನ್ನಲಾಗಿದೆ.