ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪದಕ ಕೈ ತಪ್ಪುತ್ತಿದ್ದಂತೆ ವಿನೇಶ್ ಫೋಗಟ್ ಅವರು ಕುಸ್ತಿಯಿಂದ ನಿವೃತ್ತಿ ಘೋಷಿಸಿದ್ದರು. ಇದಾಗ್ಯೂ ಬೆಳ್ಳಿ ಪದಕದೊಂದಿಗೆ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳುವ ಆಸೆಯಲ್ಲಿದ್ದರು. ಆದರೀಗ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ವಿನೇಶ್ ಫೋಗಟ್ ಅವರ ಪದಕ ಕನಸು ಕಮರಿದೆ.
2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲುವ ವಿನೇಶ್ ಫೋಗಟ್ ಕನಸು ಸಂಪೂರ್ಣ ಭಗ್ನಗೊಂಡಿದೆ. ಆಗಸ್ಟ್ 9 ರಂದು ನಡೆದ ಮಹಿಳೆಯರ 50 ಕೆಜಿ ತೂಕದ ವಿಭಾಗದ ಫೈನಲ್ನಿಂದ ಅನರ್ಹಗೊಂಡ ಬಳಿಕ ಬೆಳ್ಳಿ ಪದಕಕ್ಕಾಗಿ ವಿನೇಶ್ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಹಲವಾರು ದಿನಗಳ ಕಾಯುವಿಕೆಯ ನಂತರ ಅಂತಿಮವಾಗಿ ಈ ಮನವಿಯನ್ನು ಸಿಎಎಸ್ ತಿರಸ್ಕರಿಸಿದೆ. ಇದರೊಂದಿಗೆ ಬೆಳ್ಳಿ ಪದಕದ ನಿರೀಕ್ಷೆಯಲ್ಲಿದ್ದ ವಿನೇಶ್ ಫೋಗಟ್ ಅವರ ಕನಸು ಕೂಡ ಕಮರಿದೆ.
ಆದರೆ ಈ ಅನರ್ಹತೆಯನ್ನು ಪ್ರಶ್ನಿಸಿದ ವಿನೇಶ್ ಫೋಗಟ್ ಅವರು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ಮೊರೆ ಹೋಗಿದ್ದರು. ಸೆಮಿಫೈನಲ್ವರೆಗೂ ನಿಗದಿತ ತೂಕದಲ್ಲೇ ಸ್ಪರ್ಧಿಸಿದ್ದರಿಂದ ಬೆಳ್ಳಿ ಪದಕವನ್ನು ನೀಡಬೇಕೆಂದು ಫೋಗಟ್ ಪರ ವಕೀಲರು ಮನವಿ ಸಲ್ಲಿಸಿದ್ದರು.