ಕೊಲೆ ಕೇಸ್ನಲ್ಲಿ ಜೈಲುಪಾಲಾಗಿರುವ ದರ್ಶನ್ ಹುಚ್ಚು ಅಭಿಮಾನಿಯೊಬ್ಬ ತನ್ನ ಪುಟ್ಟ ಮಗುವಿಗೆ ಕೈದಿಯಂತೆ ಫೋಟೋ ಶೂಟ್ ಮಾಡಿಸಿದ್ದಾನೆ. ಮಗುವಿನ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಫೋಸ್ಟ್ ಹಾಕಿದ್ದು ಫುಲ್ ವೈರಲ್ ಆಗಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲುಪಾಲಾಗಿರುವ ನಟ ದರ್ಶನ್ನ ಹುಚ್ಚು ಅಭಿಮಾನಿಯೊಬ್ಬ ಅಂಧಾಭಿಮಾನವನ್ನು ತೋರಿದ್ದಾನೆ. ಒಂದು ವರ್ಷದ ಮಗುವಿಗೆ ಜೈಲು ಕೈದಿಯ ರೀತಿ ಬಟ್ಟೆ ಹಾಕಿಸಿ ಫೋಟೋ ಶೋಟ್ ಮಾಡಿಸಿದ್ದಾರೆ. ಈ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾನೆ. ದರ್ಶನ್ಗೆ ಕೊಡಲಾದ ಕೈದಿ ನಂಬರನ್ನು ಮಗುವಿಗೆ ಹಾಕಿಸಿದ್ದಾನೆ. ಕೈ ಕೋಳದ ಮಾದರಿ ಕೈದಿಗಳ ರೀತಿ ಬಿಳಿ ಬಟ್ಟೆ ಹಾಕಿಸಿದ್ದಾನೆ. ಇದೀಗ ಮಗುವಿಗೆ ಈ ರೀತಿ ಫೋಟೋ ಶೂಟ್ ಮಾಡಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಾನಾ ರೀತಿಯ ಅಭಿಪ್ರಾಯಗಳು ವ್ಯಕ್ತವಾಗಿದೆ.