- ವಿಶ್ವೇಶ್ವರಯ್ಯ ಕಬ್ಬಿಣ, ಉಕ್ಕು ಕಾರ್ಖಾನೆಗೆ ಹೆಚ್ಡಿಕೆ ಭೇಟಿ
- ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ, ಉಕ್ಕು ಕಾರ್ಖಾನೆಯಲ್ಲಿ ಪರಿಶೀಲಿಸಿದ ಹೆಚ್ಡಿಕೆ
ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯಲ್ಲಿ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಶ್ರೀ HD ಕುಮಾರಸ್ವಾಮಿ ಅವರು ಪರಿಶೀಲನೆ ನಡೆಸಿದರು.
ಸಂಸದ ಬಿ.ವೈ.ರಾಘವೇಂದ್ರ, ಭಾರತೀಯ ಉಕ್ಕು ಪ್ರಾಧಿಕಾರ – SAIL ಅಧ್ಯಕ್ಷ ಅಮರೆಂದು ಪ್ರಕಾಶ್, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್, ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯ ನಾಯಕ್ ಹಾಗೂ ಕಾರ್ಖಾನೆಯ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.