ನವದೆಹಲಿ: ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ಇಂದು ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸತತ 10 ವರ್ಷಗಳಿಂದ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ ಹ್ಯಾಟ್ರಿಕ್ ಕನಸಿನಲ್ಲಿದ್ದರೆ 27 ವರ್ಷಗಳ ಬಳಿಕ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿ ಬಿಜೆಪಿ ಮತ್ತು 10 ವರ್ಷಗಳ ಬಳಿಕ ಅಧಿಕಾರದ ಗುರಿಯಲ್ಲಿ ಕಾಂಗ್ರೆಸ್ ಇದೆ.
70 ಸ್ಥಾನಗಳಿಗೆ ಒಟ್ಟು 699 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 1.56 ಕೋಟಿ ಮತದಾರರು ಬುಧವಾರ ತಮ್ಮ ಹಕ್ಕು ಚಲಾವಣೆಯ ಅವಕಾಶ ಹೊಂದಿದ್ದಾರೆ. ಮತದಾನಕ್ಕಾಗಿ ಒಟ್ಟು 13766 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಬೆಳಗ್ಗೆ 7ರಿಂದ ಸಂಜೆ 6.30 ರವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಮತದಾನ ಪ್ರಕ್ರಿಯೆ ಮುಗಿದ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಲಿದ್ದು, ದೆಹಲಿಯ ಮುಂದಿನ ಚುಕ್ಕಾಣಿ ಯಾರ ಕೈಗೆ ಸಿಗಲಿದೆ ಎಂಬುದರ ಕುರಿತು ಅವು ಸುಳಿವು ನೀಡಲಿವೆ.
ಪ್ರಮುಖ ಅಭ್ಯರ್ಥಿಗಳು
ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿಯಿಂದ ಪರ್ವೇಶ್ ಶರ್ಮಾ, ಹಾಲಿ ಸಿಎಂ ಆತಿಶಿ ವಿರುದ್ದ ಬಿಜೆಪಿಯಿಂದ ರಮೇಶ ಬಿದೂರಿ ಕಾಂಗ್ರೆಸ್ನಿಂದ ಅಲ್ಕಾ ಲಂಬಾ ಕಣಕ್ಕೆ ಉಳಿದಿದ್ದಾರೆ. ಉಳಿದಂತೆ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ, ಮಾಜಿ ಸಚಿವ ಸತ್ಯೇಂದ್ರ ಜೈನ್, ಸೋಮನಾಥ್ ಭಾರ್ತಿ, ಮೊದಲಾದ ವರು ಕಣದಲ್ಲಿದ್ದಾರೆ.
ದೇಶದಲ್ಲೇ ಮೊದಲ ಬಾರಿಗೆ ಉಚಿತ ವಿದ್ಯುತ್, ಉಚಿತ ಕುಡಿ ಯುವ ನೀರು ಯೋಜನೆ ಘೋಷಿಸಿ ಇತರ ಪಕ್ಷಗಳಿಗೆ ದಾರಿ ತೋರಿಸಿದ್ದ ಆಮ್ ಆದ್ಮಿ ಪಕ್ಷ ಈ ವರ್ಷದ ಹಳೆಯ ಗ್ಯಾರಂಟಿ ಜೊತೆಗೆ ಇನ್ನಷ್ಟು ಉಚಿತಗಳ ಘೋಷಣೆ ಮಾಡಿದೆ. ಹೀಗಾಗಿ ಅನ್ನ ದಾರಿ ಇಲ್ಲದೇ ಮತ್ತು ಕಾಂಗ್ರೆಸ್ ಕೂಡಾ ನಾನಾ ರೀತಿಯ ಗ್ಯಾರಂಟಿ ಘೋಷಿಸಿವೆ. ಬಹುತೇಕ ಮೂರೂ ಪಕ್ಷಗಳು ಕರ್ನಾ ಟಕ ಮಾದರಿ ಗೃಹಲಕ್ಷ್ಮೀ, ಉಚಿತ ವಿದ್ಯುತ್, ಉಚಿತ ನೀರು, ನಿರುದ್ಯೋಗಿಗಳಿಗೆ ಭತ್ಯೆ, ಉಚಿತ ಬಸ್ ಪ್ರಯಾಣದ ಭರವಸೆ ನೀಡಿವೆ.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc