ಇಂದು ಹರಿಯಾಣ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಇತ್ತ ಹರ್ಯಾಣದಲ್ಲಿ ಆಡಳಿತಾರೂಢ ಬಿಜೆಪಿ ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿದ್ದು, ಮತ್ತೊಂದೆಡೆ ದಶಕದ ನಂತರ ಕಾಂಗ್ರೆಸ್ ಮತ್ತೆ ಅಧಿಕಾರ ಹಿಡಿಯುವ ನಿರೀಕ್ಷೆಯಲ್ಲಿದೆ. ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 8ರಂದು ಫಲಿತಾಂಶ ಹೊರಬೀಳಲಿದೆ.
ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್ನ ಭೂಪಿಂದರ್ ಸಿಂಗ್ ಹೂಡಾ ಮತ್ತು ವಿನೇಶ್ ಫೋಗಟ್ ಹಾಗೂ ಜೆಜೆಪಿಯ ದುಷ್ಯಂತ್ ಚೌತಾಲಾ ಸೇರಿದಂತೆ 1,031 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರ ನಿರ್ಧರಿಸಲಿದ್ದಾನೆ. 90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಚುನಾವಣೆ ನಡೆಯಲಿರುವುದರಿಂದ ಬೆಳಗ್ಗೆ 7 ಗಂಟೆಗೆ ಸುಮಾರು ಎರಡು ಕೋಟಿಗೂ ಹೆಚ್ಚು ಅರ್ಹ ಮತದಾರರು ಮತ ಚಲಾಯಿಸಲಿದ್ದಾರೆ.
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 2.03 ಕೋಟಿ ಅರ್ಹ ಮತದಾರರಿದ್ದು, 1,031 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಈ ಪೈಕಿ ಯಾರ ಭವಿಷ್ಯ ಏನು ಎಂಬುದನ್ನು ಮತದಾರರು ನಿರ್ಧರಿಸಲಿದ್ದಾರೆ.