ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ದುರಂತದಲ್ಲಿ 73 ಮೃತ ದೇಹಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಏರುತ್ತಲೇ ಇದೆ. ರಕ್ಷಣಾ ಕಾರ್ಯಾಚರಣೆಗಾಗಿ ಕೇರಳ ಸರ್ಕಾರ ಭಾರತೀಯ ಸೇನೆಯ ನೆರವು ಕೋರಿತ್ತು. ಇದರ ಬೆನ್ನಲ್ಲೇ, ಭಾರತೀಯ ಸೇನೆ, NDRF ತಂಡಗಳು, ಎರಡು ಸೇನಾ ಹೆಲಿಕಾಪ್ಟರ್ಗಳು ಮತ್ತು ಇತರ ರಕ್ಷಣಾ ತಂಡಗಳು ಮುಂಡಕ್ಕೈಗೆ ತೆರಳಿವೆ.
ಕೇರಳದ ಗುಡ್ಡಗಾಡು ಪ್ರದೇಶವಾದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದಿಂದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. 122 ಇನ್ಫೆಂಟ್ರಿ ಬೆಟಾಲಿಯನ್, ಮದ್ರಾಸ್ನಿಂದ ಸೆಕೆಂಡ್-ಇನ್-ಕಮಾಂಡ್ ನೇತೃತ್ವದ 43 ಸೇನಾ ಸಿಬ್ಬಂದಿಗಳ ತಂಡ ಹಾಗೂ 300 ಜನ ನೌಕಾಪಡೆಯ ಮುಳುಗುತಜ್ಞರು ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ತೆರಳಿದ್ದಾರೆ ಎಂದು ರಕ್ಷಣಾ ಇಲಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.