ಭೂಕುಸಿತದಿಂದ ತತ್ತರಿಸಿದ ವಯನಾಡ್ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಜಿಲ್ಲೆಯಲ್ಲಿನ ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳನ್ನು ಪರಿಶೀಲಿಸಿದ್ದಾರೆ. ಭೂಕುಸಿತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದು, ಪರಿಹಾರ ಕಾರ್ಯಗಳ ಕುರಿತು ಪ್ರಧಾನಿಗೆ ಮಾಹಿತಿ ನೀಡಲಾಯಿತು. ಪ್ರಧಾನಿ ಪರಿಹಾರ ಶಿಬಿರ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತರೊಂದಿಗೆ ಸಂವಾದ ನಡೆಸಿದರು.
ಪ್ರಧಾನಿ ಮೋದಿ ಅವರು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದು ಭೂಕುಸಿತ ಮತ್ತು ನಡೆಯುತ್ತಿರುವ ಪರಿಹಾರ ಪ್ರಯತ್ನಗಳ ಬಗ್ಗೆ ಅಧಿಕಾರಿಗಳು ಅವರಿಗೆ ವಿವರವಾಗಿ ತಿಳಿಸಲಿದ್ದಾರೆ. ಜುಲೈ 30 ರಂದು ಈ ಪ್ರದೇಶದಲ್ಲಿ ಭಾರೀ ಭೂಕುಸಿತಗಳು ಸಂಭವಿಸಿದ್ದು, ಕನಿಷ್ಠ 226 ಜನರು ಸಾವಿಗೀಡಾಗಿದ್ದಾರೆ.