ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ವಯನಾಡು ಮತ್ತು ರಾಯ್ ಬರೇಲಿ ಕಣಕ್ಕಿಳಿದಿದ್ದ ರಾಹುಲ್ ಗಾಂಧಿ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ.
ಗೆಲುವಿನ ಮತಗಳು
- ಕೇರಳದ ವಯನಾಡು ಕ್ಷೇತ್ರದಲ್ಲಿ 530498 ಮತಗಳು
- ರಾಯ್ ಬರೇಲಿ ಕ್ಷೇತ್ರದಲ್ಲಿ 382467 ಮತಗಳು
ಕಳೆದ ಸಲ ರಾಹುಲ್ ಅಮೇಥಿ ಹಾಗೂ ವಯನಾಡಿನಲ್ಲಿ ಸ್ಪರ್ಧಿಸಿದ್ದರು. ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಸೋತರೂ ರಾಹುಲ್ ಗಾಂಧಿ ಅವರನ್ನು ಕೇರಳದ ವಯನಾಡಿನ ಜನ ಗೆಲ್ಲಿಸಿದ್ರು. ಸದ್ಯ ಕಳೆದ ಬಾರಿಗಿಂತಲೂ ರಾಹುಲ್ ಗಾಂಧಿ ಚಾರ್ಮ್ ಈ ಸಲ ಹೆಚ್ಚಿದೆ ಎನ್ನುತ್ತಿವೆ ಎಕ್ಸಿಟ್ ಪೋಲ್ ಸಮೀಕ್ಷೆಗಳು.