ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಓರ್ವ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಹೂಗ್ಲಿ ಜಿಲ್ಲೆಯ ಪಾಂಡುವಾ ಎಂಬಲ್ಲಿ ಬಾಲಕರು ಆಟವಾಡುತ್ತಿದ್ದ ಕೊಳದ ಬಳಿ ಈ ಘಟನೆ ನಡೆದಿದೆ.
ಮಕ್ಕಳು ಆಟವಾಡುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪಾಂಡುವ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಓರ್ವ ಸಾವನ್ನಪ್ಪಿದ್ದಾರೆ. ಘಟನೆ ಕುರಿತು ಹೂಗ್ಲಿ ಗ್ರಾಮಾಂತರ ಪೊಲೀಸರು ತನಿಖೆ ಆರಂಬಿಸಿದ್ದಾರೆ. ಸ್ಫೋಟದಲ್ಲಿ ಟಿಎಂಸಿ ಕೈವಾಡವಿದೆ ಎಂದು ಸ್ಥಳೀಯ ಬಿಜೆಪಿ ಸಂಸದ ಲಾಕೆಟ್ ಚಟರ್ಜಿ ಆರೋಪಿಸಿದ್ದಾರೆ.