ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದ ಡೊನಾಲ್ಡ್ ಟ್ರಂಪ್ ಅವರು ಜನವರಿ 20 ರಂದು ಎರಡನೇ ಬಾರಿಗೆ ಯುಎಡ್ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಟ್ರಂಪ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ಗೆ ಆಹ್ವಾನ ನೀಡಲಾಗಿದ್ದು, ಆದರೆ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ.
ಡೊನಾಲ್ಡ್ ಟ್ರಂಪ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಸೇರಿದಂತೆ ಹಲವಾರು ವಿಶ್ವದ ನಾಯಕರನ್ನು ಆಹ್ವಾನಿಸಿದ್ದಾರೆ. ಆದರೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಪಟ್ಟಿಯಲ್ಲಿ ಇಲ್ಲದಿರುವುದು ರಾಜಕೀಯ ಮತ್ತು ರಾಜತಾಂತ್ರಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಡೊನಾಲ್ಡ್ ಟ್ರಂಪ್ ಮತ್ತು ಕಮಲಾ ಹ್ಯಾರಿಸ್ ಅವರು ಅಮೆರಿಕ ಅಧ್ಯಕ್ಷೀಯ ರೇಸ್ನಲ್ಲಿ ಮುಖಾಮುಖಿಯಾಗಿದ್ದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಲ್ಗೊಳ್ಳಲು ನ್ಯೂಯಾರ್ಕ್ಗೆ ತೆರಳಿದ್ದರು. ಆ ವೇಳೆ ಟ್ರಂಪ್ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ಮೋದಿಯೊಂದಿಗಿನ ಉನ್ನತ ಮಟ್ಟದ ಸಭೆಯು ತನ್ನ ಚುನಾವಣಾ ಇಮೇಜ್ ಅನ್ನು ಬಲಪಡಿಸುತ್ತದೆ ಎಂದು ಟ್ರಂಪ್ ನಂಬಿದ್ದರು.
ಅರ್ಜೆಂಟೀನಾದ ಅಧ್ಯಕ್ಷ ಜೇವಿಯರ್ ಮಿಲ್ಲಿ ಹಂಗೇರಿಯನ್, ಪ್ರಧಾನಿ ವಿಕ್ಟರ್ ಓರ್ಬನ್ ಮತ್ತು ಇಟಾಲಿಯನ್, ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಂತಹ ವಿಶ್ವ ನಾಯಕರು ಟ್ರಂಪ್ ಅವರನ್ನು ಬೆಂಬಲಿಸುತ್ತಿದ್ದರು. ಚೀನಾದೊಂದಿಗೆ ಹದಗೆಡುತ್ತಿರುವ ಸಂಬಂಧಗಳ ದೃಷ್ಟಿಯಿಂದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರನ್ನು ಟ್ರಂಪ್ ವಿಶೇಷವಾಗಿ ಆಹ್ವಾನಿಸಿದ್ದಾರೆ. ಅಮೆರಿಕದೊಂದಿಗಿನ ತನ್ನ ಸಂಬಂಧಗಳು ಯಾವುದೇ ಒಂದು ರಾಜಕೀಯ ಪಕ್ಷಕ್ಕೆ ಸೀಮಿತವಾಗಿಲ್ಲ ಎಂಬುದನ್ನು ಭಾರತ ಯಾವಾಗಲೂ ಖಚಿತಪಡಿಸಿಕೊಂಡಿದೆ. ಟ್ರಂಪ್ ಮತ್ತು ಮೋದಿ ನಡುವಿನ ಸಂಬಂಧಗಳು ಉತ್ತಮವಾಗಿದ್ದರೂ, ಭಾರತವು ತನ್ನ ರಾಜತಾಂತ್ರಿಕ ಸಮತೋಲನವನ್ನು ಕಾಯ್ದುಕೊಳ್ಳಲು ನಿರ್ಧರಿಸಿದೆ.