ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪತ್ನಿಯನ್ನ ಭೀಕರವಾಗಿ ಹತ್ಯೆಮಾಡಲಾಗಿದೆ. 25 ವರ್ಷದ ನವ್ಯಾ ಎಂಬ ಮಹಿಳೆಯನ್ನ ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿದ್ದಾನೆ ಪತಿರಾಯ ಕಿರಣ್. ಹೆಂಡತಿಯ ಶೀಲವನ್ನ ಶಂಕಿಸಿ ನೆನ್ನೆ ಮಧ್ಯಾಹ್ನ 1:30 ರ ಸುಮಾರಿಗೆ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್ ನಲ್ಲಿ ಘಟನೆ ನಡೆದಿದೆ.
ಕಳೆದ 3 ವರ್ಷದ ಹಿಂದೆ ನವ್ಯಾ ಹಾಗೂ ಕಿರಣ್ ಇಬ್ಬರು ಪ್ರೀತಿಸಿ ಮದುವೆಯಾಗಿದ್ದರು. ತೀರ್ಥಹಳ್ಳಿ ಮೂಲದವಳಾದ ನವ್ಯಾ ಸಿನಿಮಾರಂಗದಲ್ಲಿ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಳು. ಪತಿ ಕಿರಣ್ಗೆ ಪತ್ನಿ ಶೀಲದ ಬಗ್ಗೆ ಅನುಮಾನ ಬಂದು ಗಲಾಟೆ ಮಾಡ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಕೆಂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.