KSRTC ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಬಸ್ನ ಕಿಟಕಿಗೆ ತಲೆ ಸಿಕ್ಕಿಹಾಕಿಕೊಂಡು ಪರದಾಡಿದ್ದಾರೆ. ಬಸ್ ಪ್ರಯಾಣದ ವೇಳೆ ಉಗಳುವ ಭರದಲ್ಲಿ ಕಿಟಕಿಯ ಸಣ್ಣ ಸಂದಿಯಿಂದಲೇ ತಲೆ ಹೊರ ಹಾಕಿದಾಗ ಮಹಿಳೆಯ ತಲೆ ಕಿಟಕಿಯಲ್ಲಿ ಲಾಕ್ ಆಗಿದೆ. ಹಾಗೆ ಹೊರ ಹಾಕಿದ ತಲೆ ವಾಪಸ್ ಒಳಗೆ ಬಾರದೇ ಅಲ್ಲೆ ಲಾಕ್ ಆಗಿಬಿಟ್ಟಿದೆ.
ಈ ವೇಳೆ ಮಹಿಳೆಯ ತಲೆ ಗಮನಿಸಿದ KSRTC ಬಸ್ ನ ಚಾಲಕ, ನಿರ್ವಾಹಕ ಲಾಕ್ ಆಗಿದ್ದ ಮಹಿಳೆಯ ಪರದಾಟ ಕಂಡು ಬಸ್ ನಿಲ್ಲಿಸಿದ್ದಾರೆ. ಬಳಿಕ ಅತ್ಯಂತ ಜಾಗರೂಕತೆಯಿಂದ ಮಹಿಳೆಯ ರಕ್ಷಣೆ ಮಾಡಿದ್ದಾರೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಗೆ ಯಾಕ್ ಬೇಕಿತ್ತು ಹೇಗಿದೆ ಪ್ರೀ ಬಸ್ ಎಪೆಕ್ಟ್. ಎಂದು ನೆಟ್ಟಿಗರು ಕಮೆಂಟ್ ಮೇಲೆ ಕಮೆಂಟ್ ಮಾಡ್ತಿದಾರೆ.