ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯೊಬ್ಬರ ಅಪಹರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ಭವಾನಿ ರೇವಣ್ಣ ಅವರಿಗೆ ನೀಡಿರುವ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರಿ, ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ(ಸೆ20) ಎರಡು ವಾರಗಳ ಕಾಲ ಮುಂದೂಡಿದೆ.
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠ, ಭವಾನಿ ರೇವಣ್ಣ ಪರ ವಾದ ಮಂಡಿಸಿದ ವಕೀಲ ಬಾಲಾಜಿ ಶ್ರೀನಿವಾಸನ್ ಅವರಿಗೆ, ಪ್ರಕರಣದ ಸ್ಥಿತಿಯ ವಿವರಗಳನ್ನು ನೀಡುವ ಅಫಿಡವಿಟ್ ಸಲ್ಲಿಸುವಂತೆ ಕೇಳಿದೆ.
ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ, ಇತರ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಭವಾನಿ ರೇವಣ್ಣ ತನಿಖೆಗೆ ಸಹಕರಿಸಿದ್ದಾರೆ ಎಂದು ಶ್ರೀನಿವಾಸನ್ ವಾದ ಮಂಡಿಸಿದರು. ಪ್ರಕರಣದ ಮೆರಿಟ್ಗೆ ಹೋಗುವುದಿಲ್ಲ ಎಂದು ಹೇಳಿದ ಪೀಠ, ಶ್ರೀನಿವಾಸನ್ ಅವರಿಗೆ ಅಫಿಡವಿಟ್ ಸಲ್ಲಿಸುವಂತೆ ಹೇಳಿ ಎರಡು ವಾರಗಳ ಕಾಲ ಮುಂದೂಡಿಕೆ ಮಾಡಿದೆ.
ಈ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ನೀಡಲಾದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ರಾಜ್ಯ ಸರಕಾರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯ ಬಗ್ಗೆ ಪ್ರತಿಕ್ರಿಯೆಯನ್ನು ಕೇಳಿತ್ತು.