ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣ ಹಾಗೂ ಸಂತ್ರಸ್ತೆಯ ಅಪಹರಣ ಮಾಡಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ್ದು, ವಿಚಾರಣೆ ಬಳಿಕ ಮೇ 14ರವರೆಗೆ ರೇವಣ್ಣ ಅವರಿಗೆ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶಿಸಿದೆ.
ಮಹಿಳೆ ಕಿಡ್ನ್ಯಾಪ್ ಕೇಸ್ನಲ್ಲಿ ಮೇ 14ರವರೆಗೆ 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಎಂದು ಕೋರ್ಟ್ ಆದೇಶಿಸಿದೆ. ಬೆಂಗಳೂರಿನ 17 ನೇ ಎಸಿಎಂಎಂ ನ್ಯಾಯಾಲಯದಿಂದ ಆದೇಶ ನೀಡಿದ್ದು, ಹೆಚ್.ಡಿ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.