ಯಾದಗಿರಿ ಸೈಬರ್ ಕ್ರೈಂ ಠಾಣೆಯ ಪಿಎಸ್ಐ ಪರಶುರಾಮ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ಪಿಎಸ್ಐ ಪರಶುರಾಮ ಸಾವಿಗೆ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಹಾಗೂ ಪುತ್ರ ಪಂಪಣ್ಣಗೌಡ ಕಾರಣವೆಂದು ಪಿಎಸ್ಐ ಪರಶುರಾಮ ಪತ್ನಿ ಶ್ವೇತಾ ದೂರು ದಾಖಲಿಸಿದ್ದಾರೆ. ಯಾದಗಿರಿ ಸೈಬರ್ ಕ್ರೈಮ್ ಠಾಣೆಯ ಪಿಎಸ್ಐ ಪರಶುರಾಮ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ.
ಪಿಎಸ್ಐ ಪರಶುರಾಮ ಕಳೆದ ಮೂರು ವರ್ಷಗಳಿಂದ ಯಾದಗಿರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಪಿಎಸ್ಐ ಪರಶುರಾಮ ಅವರ ಸಾವಿಗೆ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಮತ್ತು ಪುತ್ರ ಪಂಪಣ್ಣಗೌಡ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಯಾದಗಿರಿ ನಗರ ಠಾಣೆಗೆ ಪೋಸ್ಟಿಂಗ್ಗಾಗಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ 30 ಲಕ್ಷ ರುಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಪರಶುರಾಮ 30 ಲಕ್ಷ ರುಪಾಯಿ ನೀಡಿ, ಯಾದಗಿರಿ ನಗರಕ್ಕೆ ವರ್ಗಾವಣೆಯಾಗಿದ್ದರು. ಆದರೆ, ಒಂದು ವರ್ಷದ ಪೂರೈಸುವ ಮುನ್ನವೇ ಪರಶುರಾಮ್ ಅವರನ್ನು ಮತ್ತೆ ಯಾದಗಿರಿ ಸೈಬರ್ ಕ್ರೈಮ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಪಿಎಸ್ಐ ಪರಶುರಾಮ್ ಒತ್ತಡಕ್ಕೆ ಒಳಗಾಗಿದ್ದರು. ಪಿಎಸ್ಐ ಪರಶುರಾಮ ಸಾಲದ ಸುಳಿಗೆ ಸಿಲುಕಿದ್ದರು. ಪಿಎಸ್ಐ ಪರಶುರಾಮ್ ಶುಕ್ರವಾರ ಸಚಿವ ಪ್ರಿಯಾಂಕ್ ಖರ್ಗೆ ಜೊತೆಗೆ ಪೋನ್ನಲ್ಲಿ ಮಾತನಾಡಿದ್ದರು ಎಂದು ಕುಟುಂಬಸ್ಥರು ಹೇಳಿದ್ದಾರೆ.
ಪಿಎಸ್ಐ ಪರಶುರಾಮ ಸಾವಿಗೆ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಹಾಗೂ ಪುತ್ರ ಪಂಪಣ್ಣಗೌಡ ಕಾರಣವೆಂದು ಪಿಎಸ್ಐ ಪರಶುರಾಮ ಪತ್ನಿ ಶ್ವೇತಾ ದೂರು ದಾಖಲಿಸಿದ್ದಾರೆ. ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ ಪದೇ ಪದೇ ಹಣಕ್ಕೆ ಕಿರುಕುಳ ನೀಡುತ್ತಿದ್ದರು. ನಾವು ದಲಿತರು, ದುಡ್ಡು ಕೊಡಲಿಲ್ಲ ಎಂಬ ಕಾರಣಕ್ಕೆ ಶಾಸಕರು ಪೋಸ್ಟಿಂಗ್ ಕೊಟ್ಟಿಲ್ಲ. ಶಾಸಕರು ತಪ್ಪು ಮಾಡಿದ್ದಾರೆ ಅವರು ಸ್ಥಳಕ್ಕೆ ಬರಬೇಕು ಎಂದು ಪಿಎಸ್ಐ ಪರಶುರಾಮ ಪತ್ನಿ ಶ್ವೇತಾ ಒತ್ತಾಯಿಸಿದ್ದಾರೆ. ಶ್ವೇತಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ ಅವರ ಬಳಿ ದೂರು ನೀಡಿದ್ದಾರೆ.