ಈ ವರ್ಷ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಯಾದ ವಿವಾದಾತ್ಮಕ ಹೇಳಿಕೆಗಳನ್ನ ರಾಜ್ಯದ ರಾಜಕೀಯ ನಾಯಕರು, ಮಠಾಧೀಶರು ಸೇರಿದಂತೆ ಹಲವಾರು ಪ್ರಮುಖ ವ್ಯಕ್ತಿಗಳು ನೀಡಿ ಚರ್ಚೆಗೆ ಗ್ರಾಸವಾಗಿದ್ದರು. ಕೆಲವರ ಹೇಳಿಕೆಗಳು ಕರ್ನಾಟಕದಿಂದ ದೆಹಲಿ ಅಂಗಳ ಮುಟ್ಟಿದ್ದವು. ಹಾಗಾದ್ರೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್
ಕಳೆದ ರಾಜ್ಯ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಗೆದ್ದಿದ್ದ ನಾಸೀರ್ ಹುಸೇನ್ ಬೆಂಬಲಿಗರು ಗೆಲುವಿನ ಸಂಭ್ರಮಾಚರಣೆ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು. ಈ ವಿಷಯ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆ ಸೃಷ್ಟಿಸಿತ್ತು. ಈ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಸಮರವನ್ನೆ ಸಾರಿದ್ದರು. ಕಾಂಗ್ರೆಸ್ ನಾಯಕರು ಇದನ್ನ ಸಮರ್ಥನೆ ಮಾಡಿಕೊಂಡಿದ್ದು ಒಂಟು.
ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು.
ಈ ವಿವಾದಾತ್ಮಕ ಹೇಳಿಕೆಯನ್ನ ಒಕ್ಕಲಿಗ ಮಠದ ಚಂದ್ರಶೇಖರನಾಥ ಸ್ವಾಮೀಜಿ ನೀಡಿದ್ದರು. ಈ ಒಂದು ಹೇಳಿಕೆ ರಾಜ್ಯ ರಾಜಕೀಯದ ಬುಡಮೇಲು ಮಾಡಿತ್ತು. ಅಲ್ಲದೇ ಸ್ವಾಮೀಜಿಗಳ ಈ ಹೇಳಿಕೆ ರಾಜಕೀಯದಲ್ಲಿ ಹಲವಾರು ರೀತಿಯ ವಾದ ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆ ಕೊಟ್ಟ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಕೊಟ್ಟಿದ್ದರು. ಆದರೆ ಅನಾರೋಗ್ಯದ ಕಾರಣ ನೀಡಿ ವಿಚಾರಣೆಯಿಂದ ಹೊರಗುಳಿದರು.
ಗೋರಿಪಾಳ್ಯವನ್ನು ಪಾಕಿಸ್ತಾನಕ್ಕೆ ಹೋಲಿಕೆ
ಬೆಂಗಳೂರಿನ ಗೋರಿಪಾಳ್ಯ ಪಾಕಿಸ್ತಾನದಲ್ಲಿ ಇದೆಯಾ ಎಂಬ ಹೈಕೋರ್ಟ್ ನ್ಯಾಯಾಧೀಶರಿಗೆ ಸುಪ್ರಿಂಕೋರ್ಟ್ ಸಖತ್ ಕ್ಲಾಸ್ ತೆಗೆದುಕೊಂಡಿತ್ತು. ಈ ಒಂದು ಹೇಳಿಕೆ ಕೂಡ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಹೈಕೋರ್ಟ್ ನ್ಯಾಯಾಧೀಶ ವಿ ಶ್ರೀಶಾನಂದ ಅವರು ಗೋರಿಪಾಳ್ಯವನ್ನು ಪಾಕಿಸ್ತಾನಕ್ಕೆಹೋಲಿಸಿ ಮಾತನಾಡಿದ್ದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಅಗಿತ್ತು. ವೈರಲ್ ಆದ ಬೆನ್ನಲ್ಲೇ ಸುಪ್ರಿಂಕೋರ್ಟ್ ಪ್ರಕರಣವನ್ನು ಕೈಗೆತ್ತಿಕೊಂಡು ನ್ಯಾಯಾಧೀಶ ವಿ ಶ್ರೀಶಾನಂದ ಅವರಿಗೆ ಕ್ಲಾಸ್ ತೆಗೆದುಕೊಂಡಿತ್ತು.
ಹೆಚ್ಡಿ ಕುಮಾರಸ್ವಾಮಿಗೆ ಕರಿಯ
ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಮೂರು ಕ್ಷೇತ್ರಗಳ ಉಪಚುನಾವಣೆಯ ಸಂದರ್ಭದಲ್ಲಿ ಚನ್ನಪಟ್ಟಣ ಉಪಚುನಾವಣೆ ರಣಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿಯನ್ನು ಕರಿಯ ಎಂದು ಕರೆಯುವ ಮೂಲಕ ವಿವಾದ ಸೃಷ್ಟಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರನ್ನ ಹೊಗಳುವ ಬರದಲ್ಲಿ ಸಚಿವ ಜಮೀರ್ ಈ ಹೇಳಿಕೆಯನ್ನ ನೀಡಿದ್ದರು.
ಬಸವಣ್ಣನವರ ಬಗ್ಗೆ ಯತ್ನಾಳ್ ವಿವಾದಾತ್ಮಕ ಹೇಳಿಕೆ
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸದಾ ಒಂದಿಲ್ಲೊಂದು ವಿವಾದಗಳಲ್ಲೇ ಮುಳುಗಿರುತ್ತಾರೆ. ಇತ್ತೀಚೆಗೆ ಜಗಜ್ಯೋತಿ ಬಸವಣ್ಣ ಅವರ ನಿಗೂಢ ಸಾವಿನ ಕುರಿತು ಹೇಳಿಕೆ ನೀಡುವ ಮೂಲಕ ರಾಜ್ಯದಲ್ಲಿ ವಿವಾದ ಸೃಷ್ಟಿಸಿದ್ದರು. ಬಿಜೆಪಿ ಶಾಸಕ ಯತ್ನಾಳ್ ಅವರು ವಕ್ಫ್ ವಿರುದ್ಧ ಹೋರಾಟದ ವೇಳೆ ಮಾತನಾಡಿದ್ದ ಅವರು, ಬಸವಣ್ಣನವರ ಹಾಗೆ ನದಿಗೆ ಹಾರಿ ಸಾಯಬೇಕಾಗುತ್ತದೆ ಎಂದು ವಿವಾದ ಸೃಷ್ಟಿಸಿದ್ದರು.
ಲಕ್ಷ್ಮೀ ಹೆಬ್ಬಾಳ್ಕರ್ ಗೆ ಕೆಟ್ಟ ಪದ ಬಳಕೆ
ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಬಿಜೆಪಿ ಪರಿಷತ್ ಸದಸ್ಯ ಸಿಟಿ ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಅಸಂವಿಧಾನಿಕ ಪದ ಬಳಸಿದ್ದರು. . ಸಿಟಿ ರವಿ ಅಶ್ಲೀಲ ಪದ ಬಳಕೆ ಮಾಡ್ತಿದ್ದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ತೀವ್ರವಾಗಿ ಖಂಡಿಸಿದ್ದರು. ಸಿಟಿ ರವಿ 10 ಬಾರಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಅಂತಾ ಆರೋಪ ಕೇಳಿಬಂದಿತ್ತು. ಇದೇ ವಿಚಾರವಾಗಿ ಸಿಟಿ ರವಿ ಅವರು ಜೈಲಿಗೆ ಹೋಗಿ ಬಂದಿದ್ದಾರೆ. ಈ ಕುರಿತು ಲಕ್ಷ್ಮಿ ಹೆಬ್ಬಾಳ್ಳರ್ ಅವರು ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು ಕೊಟ್ಟಿದ್ದಾರೆ. ಇದೀಗ ಈ ಪ್ರಕರಣದ ತನಿಖೆ ಸಿಐಡಿ ಅಂಗಳ ತಲುಪಿದೆ.