ಮುಡಾ ಹಗರಣ ಸಂಬಂಧ ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ಕರ್ನಾಟಕ ಹೈಕೋರ್ಟ್ನಲ್ಲಿ ತಿರಸ್ಕೃತಗೊಂಡ ಬೆನ್ನಲ್ಲೇ ಅವರ ರಾಜೀನಾಮೆಗೆ ಆಗ್ರಹ ಹೆಚ್ಚಾಗಿದೆ. ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು, ಕಾರ್ಯಕರ್ತರು ಬುಧವಾರ ಬೆಂಗಳೂರಿನಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಬೆಂಗಳೂರಿನ ಕುಮಾರಕೃಪ ಗೆಸ್ಟ್ ಹೌಸ್ ಬಳಿ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.
ಮುಡಾ ಹಗರಣ ವಿಚಾರ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕೆಂದು ಬಿಜೆಪಿ ಪಟ್ಟುಹಿಡಿದಿದೆ. ಮತ್ತೊಂದೆಡೆ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ, ಕಾನೂನು ಹೋರಾಟ ಮುಂದುವರಿಸುವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಮಧ್ಯೆ ಬೆಂಗಳೂರಿನ ಕುಮಾರಕೃಪ ಗೆಸ್ಟ್ ಹೌಸ್ ಬಳಿ ಬುಧವಾರ ಬಿಜೆಪಿ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.