ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ಸ್ಪಿನ್ನರ್ಗಳ ಆರ್ಭಟವೇ ಮುಂದುವರಿದಿದ್ದು, ಉಭಯ ತಂಡಗಳ ಒಟ್ಟು 14 ವಿಕೆಟ್ ಪತನಗೊಂಡಿದೆ. ಭಾರತದ ವಿರುದ್ಧ ತನ್ನ 2ನೇ ಇನ್ನಿಂಗ್ಸ್ ಆರಂಭಿಸಿರುವ ನ್ಯೂಜಿಲೆಂಡ್ ತಂಡ 2ನೇ ದಿನದ ಅಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿದ್ದು, 301 ರನ್ಗಳ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ.
243 ರನ್ಗಳ ಹಿನ್ನಡೆಯೊಂದಿಗೆ ಕ್ರೀಸ್ ಆರಂಭಿಸಿದ ಟೀಂ ಇಂಡಿಯಾ ಬ್ಯಾಟರ್ಗಳ ವೈಫಲ್ಯದಿಂದಾಗಿ ಕೇವಲ 156 ರನ್ಗಳಿಗೆ ಆಲೌಟ್ ಆಯಿತು. ಬಳಿಕ ಇನ್ನಿಂಗ್ಸ್ ಆರಂಭಿಸಿದ ನ್ಯೂಜಿಲೆಂಡ್ ಆರಂಭದಲ್ಲೇ ಪ್ರಮುಖ ವಿಕೆಟ್ಗಳನ್ನು ಕಳೆದುಕೊಂಡಿತು. ಇದರ ಹೊರತಾಗಿಯೂ ನಾಯಕ ಟಾಮ್ ಲಾಥಮ್ ಅವರ ಅಮೋಘ ಅರ್ಧಶತಕದೊಂದಿಗೆ 200 ರನ್ಗಳ ಗಡಿ ಸಮೀಪಿಸುವಲ್ಲಿ ಯಶಸ್ವಿಯಾಯಿತು.
ಇದನ್ನು ಓದಿ: ಟಬುಗೆ ನಾನು ಬೇಕು. ಆದರೆ ಆಕೆಗೆ ನಾನು ಸಿಗುವುದಿಲ್ಲ’: ಅಜಯ್ ದೇವಗನ್!
ದ್ವಿತೀಯ ಇನ್ನಿಂಗ್ಸ್ನಲ್ಲಿ ಲಾಥಮ್ 86 ರನ್ (133 ಎಸೆತ, 10 ಬೌಂಡರಿ) ಗಳಿಸಿದ್ರೆ, ವಿಲ್ ಯಂಗ್ 23 ರನ್, ಡೆವೋನ್ ಕಾನ್ವೆ 17 ರನ್, ಡೇರಿಲ್ ಮಿಚೆಲ್ 18 ರನ್ ಹಾಗೂ ರಚಿನ್ ರವೀಂದ್ರ 9 ರನ್ ಗಳಿಸಿ ಪೆವಿಲಿಯನ್ ಸೇರಿದರು. ಇನ್ನೂ ಟಾಮ್ ಬ್ಲಂಡೆಲ್ 30 ರನ್ (70 ಎಸೆತ, 2 ಬೌಂಡರಿ), ಗ್ಲೆನ್ ಫಿಲಿಪ್ಸ್ 9 ರನ್ ಗಳಿಸಿ ಅಜೇಯರಾಗುಳಿದಿದ್ದಾರೆ. ಶನಿವಾರ 3ನೇ ದಿನದಾಟ ಆರಂಭಿಸಲಿದ್ದಾರೆ.
ಸೂಪರ್ ʻಸುಂದರ್ʼ:
ಮೊದಲ ಇನ್ನಿಂಗ್ಸ್ನಲ್ಲಿ 7 ವಿಕೆಟ್ ಕಬಳಿಸಿ ಟೀಂ ಇಂಡಿಯಾಕ್ಕೆ ಆಧಾರವಾಗಿದ್ದ ಆಫ್ ಸ್ಪಿನ್ನರ್ ವಾಷಿಂಗ್ಟನ್ ಸುಂದರ್ 2ನೇ ದಿನದಾಟದಲ್ಲೂ 4 ವಿಕೆಟ್ ಪಡೆಯುವ ಮೂಲಕ ಭರ್ಜರಿ ಕಮಾಲ್ ಮಾಡಿದ್ದಾರೆ. ಇದರೊಂದಿಗೆ ಸಾಥ್ ನೀಡಿರುವ ರವಿಚಂದ್ರನ್ ಅಶ್ವಿನ್ 1 ವಿಕೆಟ್ ಪಡೆದಿದ್ದಾರೆ.
ಫ್ಲಾಪ್ ಆದ ಬ್ಯಾಟರ್ಸ್:
ಮೊದಲ ಇನ್ನಿಂಗ್ಸ್ನಲ್ಲಿ ಕಿವೀಸ್ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ ದಾಳಿಗೆ ತತ್ತರಿಸಿದ ಭಾರತದ ಬ್ಯಾರ್ಟ್ಗಳು ರನ್ ಕದಿಯಲು ತಿಣುಕಾಡಿದರು. ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್ ತಲಾ 30 ರನ್ ಗಳಿಸಿದ್ರೆ ರವೀಂದ್ರ ಜಡೇಜಾ 38 ರನ್ ಗಳಿಸಿದ್ರು. ಇನ್ನುಳಿದಂತೆ ರಿಷಭ್ ಪಂತ್ 18 ರನ್, ಸರ್ಫರಾಜ್ ಖಾನ್ 11 ರನ್, ರವಿಚಂದ್ರನ್ ಅಶ್ವಿನ್ 4 ರನ್, ಆಕಾಶ್ ದೀಪ್ 6 ರನ್ ಗಳಿಸಿದ್ರೆ, ವಾಷಿಂಗ್ಟನ್ ಸುಂದರ್ 18 ರನ್ ಗಳಿಸಿ ಅಜೇಯರಾಗುಳಿದರು. ನಾಯಕ ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಶೂನ್ಯ ಸುತ್ತಿದರು.
ಇದನ್ನು ಓದಿ: ಉಗ್ರಂ ಮಂಜುರನ್ನು ಏಕಾಏಕಿ ಎತ್ತಿ ಬಿಸಾಡಿದ ನಟ ತ್ರಿವಿಕ್ರಮ್!
ಸ್ಯಾಂಟ್ನರ್ ಸ್ಪಿನ್ ಮಿಂಚು:
ಕಿವೀಸ್ ಪರ ಮೊದಲ ಇನ್ನಿಂಗ್ಸ್ನಲ್ಲಿ ಮಿಚೆಲ್ ಸ್ಯಾಂಟ್ನರ್ 19.3 ಓವರ್ಗಳಲ್ಲಿ 53 ರನ್ ಬಿಟ್ಟುಕೊಟ್ಟು 7 ವಿಕೆಟ್ ಕಿತ್ತರೆ, ಗ್ಲೆನ್ ಫಿಲಿಪ್ಸ್ 2 ವಿಕೆಟ್ ಹಾಗೂ ಟಿಮ್ ಸೌಥಿ 1 ವಿಕೆಟ್ ಕಿತ್ತರು.