ಪಿಂಚಣಿಯನ್ನು ಪಡೆಯುವ ನಿವೃತ್ತ ಸರ್ಕಾರಿ ನೌಕರರಿಗೆ ಭಾರತೀಯ ಅಂಚೆ ಇಲಾಖೆ ಸಿಹಿಸುದ್ದಿಯೊಂದನ್ನು ನೀಡಿದೆ. ಪಿಂಚಣಿ ಪಡೆಯುವವರು ನವೆಂಬರ್ ತಿಂಗಳಿನಲ್ಲಿ ಜೀವನ ಪ್ರಮಾಣ ಪತ್ರ ಸಲ್ಲಿಕೆ ಮಾಡುವುದು ಕಡ್ಡಾಯವಾಗಿದೆ. ಇದಕ್ಕಾಗಿ ನಿವೃತ್ತ ನೌಕರರು ಕಛೇರಿಗೆ ಅಲೆದಾಟ ಮಾಡುವುದನ್ನು ತಪ್ಪಿಸಲು ಅಂಚೆ ಇಲಾಖೆ ಮುಂದಾಗಿದೆ.
ಮನೆಯಿಂದಲೇ ಪಿಂಚಣಿದಾರರು ಡಿಜಿಟಲ್ ಜೀವನ ಪ್ರಮಾಣ ಪತ್ರ ಪಡೆಯಲು ಅನುಕೂಲವನ್ನು ಕಲ್ಪಿಸಲಾಗಿದೆ. ಭಾರತೀಯ ಅಂಚೆ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ಗಳ ಮೂಲಕ ಮನೆ ಬಾಗಿಲಿನಲ್ಲೇ ಪಿಂಚಣಿದಾರರು ಸುಲಭವಾಗಿ ಡಿಜಿಟಲ್ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅಂಚೆ ಇಲಾಖೆ ಹೇಳಿದೆ. ಈ ಸೇವೆಯ ಉಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದೆ.
ಇದನ್ನು ಓದಿ: ರಸ್ತೆ ಬಳಿ ಟೀ ಕುಡಿದ ಕನ್ನಡದ ಖ್ಯಾತ ನಟಿ..!
ಪಿಂಚಣಿದಾರರು ಅಥವಾ ಕುಟುಂಬದ ಪಿಂಚಣಿದಾರರು ತಮ್ಮ ಹತ್ತಿರದ ಅಂಚೆ ಕಚೇರಿಯಲ್ಲಿ ಅಥವಾ ಪೋಸ್ಟ್ ಮ್ಯಾನ್ ಮೂಲಕ ರೂ. 70 ಶುಲ್ಕ ನೀಡುವುದರೊಂದಿಗೆ ಕೆಲವೇ ನಿಮಿಷಗಳಲ್ಲಿ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಪಿಪಿಒ ಸಂಖ್ಯೆ ಮತ್ತು ಪಿಂಚಣಿದಾರರ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತಮ್ಮ ಬೆರಳಚ್ಚು ಪರಿಶೀಲಿಸಿ ಡಿಜಿಟಲ್ ಜೀವನ ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ.
ಯಾವುದೇ ಕಛೇರಿಗೆ ಭೇಟಿ ನೀಡದೆ ಪಿಂಚಣಿ ಪಡೆಯುವವರು ತಮ್ಮ ಮನೆಯ ಬಾಗಿಲಿನಲ್ಲಿಯೇ ನವೆಂಬರ್ 30ರೊಳಗಾಗಿ ಪಡೆಯಬಹುದು. ಡಿಜಿಟಲ್ ಜೀವನ ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ www.ippbonline.com ವೆಬ್ಸೈಟ್ ಮತ್ತು marketing@ippbonline.in ಇ-ಮೇಲ್ ಐಡಿಗೆ ಸಂಪರ್ಕಿಸಲು ಸಹ ಕೋರಲಾಗಿದೆ.
ಇದನ್ನು ಓದಿ: ಪ್ರತಿಷ್ಠಿತ ಅಂತಾರಾಷ್ಟ್ರೀಯ ಗೋವಾ ಫಿಲ್ಮ್ ಫೆಸ್ಟಿವಲ್ಗೆ ಕನ್ನಡದ ‘ಕೆರೆಬೇಟೆ’ ಆಯ್ಕೆ..!
ಪ್ರತಿ ವರ್ಷ ನವೆಂಬರ್ ತಿಂಗಳಿನಲ್ಲಿ ಪಿಂಚಣಿ ಪಡೆಯುವವರು ಜೀವನ ಪ್ರಮಾಣ ಪತ್ರವನ್ನು ಸಲ್ಲಿಕೆ ಮಾಡುವುದು ಕಡ್ಡಾಯವಾಗಿದೆ. ಇಲ್ಲವಾದಲ್ಲಿ ಅವರ ಪಿಂಚಣಿಯನ್ನು ತಡೆಹಿಡಿಯಲಾಗುತ್ತದೆ. ಕೇಂದ್ರ ಸರ್ಕಾರ ಪಿಂಚಣಿದಾರರಿಗೆ ಅನುಕೂಲ ಮಾಡಿಕೊಡಲು ಡಿಜಿಟಲ್ ಜೀವನ ಪ್ರಮಾಣ ಪತ್ರವನ್ನು ಸಲ್ಲಿಕೆ ಮಾಡುವ ಕುರಿತು ಜಾಗೃತಿ ಮೂಡಿಸಲು ನವೆಂಬರ್ನಲ್ಲಿ ವಿಶೇಷ ಅಭಿಯಾನವನ್ನು ಸಹ ಆಯೋಜನೆ ಮಾಡಿದೆ. ನವೆಂಬರ್ 1ರಂದು ಈ ಅಭಿಯಾನಕ್ಕೆ ಚಾಲನೆ ದೊರೆಯಲಿದೆ. ಡಿಜಿಟಲ್ ಜೀವನ ಪ್ರಮಾಣ ಪತ್ರವನ್ನು ಸಲ್ಲಿಕೆ ಮಾಡುವುದು ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ ದೇಶಾದ್ಯಂತ ಡಿಜಿಟಲ್ ಜೀವನ ಪ್ರಮಾಣ ಪತ್ರದ ಅಭಿಯಾನವನ್ನು ಕೈಗೊಂಡಿದೆ. ದೇಶದ 800 ನಗರ/ ಜಿಲ್ಲಾ ಕೇಂದ್ರಗಳಲ್ಲಿ ನವೆಂಬರ್ 1 ರಿಂದ 30ರ ತನಕ ಈ ಅಭಿಯಾನ ನಡೆಯಲಿದೆ.
ಇಂಡಿಯನ್ ಪೋಸ್ಟಲ್ ಪೇಮೆಂಟ್ ಬ್ಯಾಂಕ್ ಮೂಲಕವೂ 785 ಜಿಲ್ಲೆಗಳಲ್ಲಿ 1.8 ಲಕ್ಷ ಪೋಸ್ಟ್ ಮಾನ್, ಗ್ರಾಮೀಣ ಅಂಚೆ ಸಿಬ್ಬಂದಿಗಳ ಮೂಲಕವೂ ಇದನ್ನು ನಡೆಸಲಾಗುತ್ತಿದೆ. 2022ರಲ್ಲಿಯೇ ಪಿಂಚಣಿದಾರರಿಗೆ ಬೆರಳಚ್ಚು ಆಧರಿತ ಡಿಜಿಟಲ್ ಜೀವನ ಪ್ರಮಾಣ ಪತ್ರವನ್ನು ಮನೆ ಬಾಗಿಲಿನಲ್ಲಿ ಒದಗಿಸಲು ಒಪ್ಪಂದವನ್ನು ಮಾಡಿಕೊಳ್ಳಲಾಗಿತ್ತು. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ನೊಂದಿಗೆ ದಿನಾಂಕ 29/11/2022ರಲ್ಲಿ ಈ ಕುರಿತ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು.
ಇದನ್ನು ಓದಿ: ಸಿನಿಮಾ ಹಿಟ್ ಆದ ಕೂಡಲೇ ಸ್ಟಾರ್ಗಳಂತೆ ವರ್ತಿಸುವುದನ್ನು ಬಿಡಬೇಕು : ರೋಹಿತ್ ಶೆಟ್ಟಿ!
ಪಿಂಚಣಿದಾರರು ವಾರ್ಷಿಕ ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸಲು ಸಾಧ್ಯವಾಗುವಂತೆ, ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ನವರು, ಬೆರಳಚ್ಚು ಆಧಾರಿತ ಡಿಜಿಟಲ್ ಜೀವನ ಪ್ರಮಾಣ ಪತ್ರದ ಸೌಲಭ್ಯವನ್ನು ರೂ. 70ರ ಶುಲ್ಕದೊಂದಿಗೆ, ಪಿಂಚಣಿದಾರರ ಹತ್ತಿರದ ಅಂಚೆ ಕಚೇರಿಯಲ್ಲಿ ಅಥವಾ ಮನೆ ಬಾಗಿಲಲ್ಲಿ ನೀಡುತ್ತಿದ್ದಾರೆ. ಈ ಕುರಿತು ಖಜಾನೆ ಇಲಾಖೆ ಹಾಗೂ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿದೆ.