ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ರದ್ದುಮಾಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ನಂತರ ಹೈಕೋರ್ಟ್ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಈ ಬೆನ್ನಲ್ಲೇ ಎಸ್ ಐ ಟಿ ಅಧಿಕಾರಿಗಳು ಭವಾನಿ ರೇವಣ್ಣಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್ ಪ್ರಕಟಿಸಿತ್ತು. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಭವಾನಿ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿತ್ತು.