ಮಳೆಗಾಲ ಮುಕ್ತಾಯದ ಹಂತಕ್ಕೆ ಬಂದಿದ್ದರೂ ಸಹ ಇನ್ನೂ ಮಾನ್ಸೂನ್ ಮಳೆಯ ಅಬ್ಬರ ನಿಂತಿಲ್ಲ. ದೇಶಾದ್ಯಂತ ಈಗಲೂ ಮಳೆಯಾಗುತ್ತಿದೆ. ಉತ್ತರ ಭಾರತದ ಬಹುತೇಕ ಎಲ್ಲಾ ಭಾಗಗಳಿಂದ ಮಾನ್ಸೂನ್ ಮಳೆಯು ಹಿಂದಕ್ಕೆ ಸರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಗಲಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆ ಇದೆ. ತಂಪಾದ ಗಾಳಿಯಿಂದಾಗಿ ದೆಹಲಿ ಎನ್ಸಿಆರ್ನಲ್ಲಿ ತಾಪಮಾನ ನಿರಂತರವಾಗಿ ಕುಸಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪಶ್ಚಿಮ, ಮಧ್ಯ ಮತ್ತು ದಕ್ಷಿಣ ಭಾರತದಲ್ಲಿ ಮುಂಗಾರುವಿನ ಹಿನ್ನಡೆ ಮುಂದುವರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಾಯುವ್ಯ ಮಾನ್ಸೂನ್ ಹಿಂತೆಗೆದುಕೊಳ್ಳುವಿಕೆಯು ಈಶಾನ್ಯ ಭಾರತದ ಮೇಲೆ ಇನ್ನೂ ಪರಿಣಾಮ ಬೀರುತ್ತಿದೆ. ಶನಿವಾರ ಕೇರಳದ ಕೋಝಿಕ್ಕೋಡ್ ನಲ್ಲಿ 180 ಮಿ.ಮೀ, ಉತ್ತರ ಮಧ್ಯ ಕರ್ನಾಟಕದಲ್ಲಿ 170 ಮಿ.ಮೀ ಹಾಗೂ ತಮಿಳುನಾಡಿನಲ್ಲಿ 150 ಮಿ.ಮೀ ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ 13ರ ಭಾನುವಾರದಂದು ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ, ವಿದರ್ಭ, ದಕ್ಷಿಣ ಕರ್ನಾಟಕ, ಕೇರಳ ಮತ್ತು ತಮಿಳುನಾಡು ಹಾಗೂ ಅಸ್ಸಾಂ ಮತ್ತು ಅರುಣಾಚಲ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮುಂಬೈ ಸುತ್ತಮುತ್ತಲಿನ ಪ್ರದೇಶದಲ್ಲಿ ಈಶಾನ್ಯ ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದೇ ಸಮಯದಲ್ಲಿ, ತಮಿಳುನಾಡು ಮತ್ತು ಅಂಡಮಾನ್ ನಿಕೋಬಾರ್ ಬಳಿ ಎರಡು ಅಪಾಯಕಾರಿ ಚಂಡಮಾರುತಗಳು ಸೃಷ್ಟಿಯಾಗುತ್ತಿದ್ದು, ಇದರಿಂದಾಗಿ ತಮಿಳುನಾಡಿನಲ್ಲಿ ಮುಂಬರುವ 2 ರಿಂದ 3 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್ 13 ರಂದು ಅಂದರೆ ಇಂದು ಮಧ್ಯಪ್ರದೇಶ, ಬಿಹಾರ ಮತ್ತು ಛತ್ತೀಸ್ಗಢದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಜನರು ಮನೆಯಿಂದ ಹೊರಬರುವಾಗ ಎಚ್ಚರಿಕೆ ವಹಿಸಬೇಕು ಅಂತಾನೂ ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಇನ್ನು, ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯನ್ನು ಗಮನದಲ್ಲಿಟ್ಟುಕೊಂಡು, ಹವಾಮಾನ ಇಲಾಖೆಯು ಅಕ್ಟೋಬರ್ 14 ರಂದು ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯನ್ನು ವ್ಯಕ್ತಪಡಿಸಿದೆ. ಇದಕ್ಕಾಗಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಕೂಡ ನೀಡಿದೆ.
ಕರ್ನಾಟಕದ ವಾತಾವರಣ ನೋಡೋದಾದ್ರೆ ಬೆಂಗಳೂರಿನಲ್ಲಿ ಇಂದು ಸ್ವಲ್ಪ ಮಟ್ಟಿಗೆ ಮೋಡ ಮುಸುಕಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ನಗರದ ಕೆಲ ಭಾಗದಲ್ಲಿ ತುಂತುರು ಮಳೆ ಸುರಿಯಲಿದೆ. ಇನ್ನುಳಿದಂತೆ ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದ ಕೆಲ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಮಳೆಗಾಲ ಮುಕ್ತಾಯದ ಹಂತಕ್ಕೆ ಬಂದಿದ್ದರೂ ಸಹ ಇನ್ನೂ ಮಾನ್ಸೂನ್ ಮಳೆಯ ಅಬ್ಬರ ನಿಂತಿಲ್ಲ. ದೇಶಾದ್ಯಂತ ಈಗಲೂ ಮಳೆಯಾಗುತ್ತಿದೆ.