ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ 65 ವರ್ಷದ ವೃದ್ದೆ ರೋಗಿಯ ಮೇಲೆ 24 ವರ್ಷದ ಯುವಕ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಚಿಕಿತ್ಸೆಗೆ ಬಂದು ಆಸ್ಪತ್ರೆಯ ಆಕ್ಸಿಜನ್ ಪ್ಲಾಂಟ್ ಬಳಿ ಇದ್ದ ವೃದ್ದೆ ಮೇಲೆ ಚಿಕಿತ್ಸೆಗೆ ಬಂದಿದ್ದ 24 ವರ್ಷದ ಯುವಕನಿಂದ ಅಮಾನವೀಯ ಘಟನೆ ನಡೆದಿದೆ. ಈ ಆರೋಪಿಯನ್ನು ಚಿಂತಾಮಣಿ ನಗರದ ಹೈದರಾಲಿ ನಗರದ ಇರ್ಪನ್ ಎಂದು ಗುರುತಿಸಲಾಗಿದೆ. ಇನ್ನು ಅಸ್ವಸ್ಥ ವೃದ್ದೆಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಂತೋಷ ಕುಮಾರ್ ಅವರು ಚಿಂತಾಮಣಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.