ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. 52 ವರ್ಷದ ಕನಕಪುರ ಮೂಲದ ಗುರುಪ್ರಸಾದ್ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್ ಚಿತ್ರದ ಮೂಲಕ ಮನೆಮಾತಾಗಿದ್ದರು.
ಇದನ್ನು ಓದಿ: ಕೊಳೆತ ಸ್ಥಿತಿಯಲ್ಲಿ ಗುರುಪ್ರಸಾದ್ ದೇಹ ಪತ್ತೆ..!
ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 15ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಗುರುಪ್ರಸಾದ್ ಅಭಿನಯಿಸಿದ್ದರು. ಹುಡುಗರು, ವಿಷಲ್, ಸೂಪರ್ ರಂಗ ಸಿನಿಮಾಗಳಿಗೆ ಡೈಲಾಗ್ ರೈಟರ್ ಆಗಿ ಕೆಲಸ ನಿರ್ವಹಿಸಿದ್ದರು. ಕನ್ನಡದಲ್ಲಿ 5 ಸಿನಿಮಾಗಳನ್ನು ಗುರುಪ್ರಸಾದ್ ನಿರ್ದೇಶನ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ, ಡೈರೆಕ್ಟರ್ಸ್ ಸ್ಪೆಷಲ್, ಎರಡನೇ ಸಲ, ರಂಗನಾಯಕ ಮತ್ತು ಅದೇಮಾ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು.
ಇದನ್ನು ಓದಿ: ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್..!
ಸದ್ಯ ʻಅದೇಮಾʼ ಸಿನಿಮಾ ರಿಲೀಸ್ಗೆ ರೆಡಿಯಾಗಿತ್ತು. ಗುರುಪ್ರಸಾದ್ ಹಿರಿತೆರೆ ಮಾತ್ರವಲ್ಲದೇ ಕಿರುತೆರೆಯಲ್ಲೂ ಫೇಮಸ್ ಆಗಿದ್ದರು , ಕನ್ನಡದ ಅನೇಕ ರಿಯಾಲಿಟಿ ಶೋಗಳಾದ ತಕಧಿಮಿತ ಡ್ಯಾನ್ಸಿಂಗ್ ಸ್ಟಾರ್, ಪುಟಾಣಿ ಪಂಟ್ರು-2, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್, ಭರ್ಜರಿ ಕಾಮಿಡಿ ಶೋಗಳಲ್ಲಿ ಜಡ್ಜ್ ಆಗಿ ಕೂಡ ಕೆಲಸ ಮಾಡಿದ್ದರು. ಮತ್ತು ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಆದ ಬಿಗ್ಬಾಸ್ ಸೀಸನ್ 2 ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದರು. ಆದರೆ ಈಗ ಸಾಲದ ಬಾದೆ ತಾಳಲಾರದೆ ಅವರ ಅಪಾರ್ಟ್ಮೆಂಟ್ನಲ್ಲಿ ನೇಣಿಗೆ ಶರಣಾಗಿದ್ದಾರೆ. ಅವರ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.