ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹಿಂಪಡೆಯಲಾಗಿದೆ. ಸೆಷನ್ಸ್ ಕೋರ್ಟ್ನಲ್ಲೇ ಅರ್ಜಿ ಸಲ್ಲಿಸಲು ಪ್ರಜ್ವಲ್ ರೇವಣ್ಣ ಪರ ವಕೀಲರಿಗೆ ಹೈಕೋರ್ಟ್ ಅವಕಾಶ ನೀಡಿತ್ತು. ಇನ್ನು ಅತ್ತ ಮೈಸೂರು ಜಿಲ್ಲೆ ಕೆ.ಆರ್.ನಗರದ ಮಹಿಳೆ ಅಪಹರಣ ಪ್ರಕರಣ ರದ್ದು ಕೋರಿದ್ದ ಹೆಚ್.ಡಿ.ರೇವಣ್ಣ ಅರ್ಜಿ ಮುಂದೂಡಲಾಗಿದೆ. ಇನ್ನು ಹೆಚ್.ಡಿ.ರೇವಣ್ಣ ಜಾಮೀನು ರದ್ದು ಕೋರಿ ಎಸ್ಐಟಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು 3 ವಾರ ಮುಂದೂಡಿಕೆ ಮಾಡಲಾಗಿದೆ. ಇತ್ತೀಚೆಗೆ ಪ್ರಜ್ವಲ್ ರೇವಣ್ಣ ಅರ್ಜಿಯನ್ನು ಕೋರ್ಟ್ ಮುಂದೂಡಿತ್ತು. ತ್ವರಿತ ವಿಚಾರಣೆ ಅಗತ್ಯವಿಲ್ಲವೆಂದು ಜಾಮೀನು ಅರ್ಜಿ ವಿಚಾರಣೆಯನ್ನು ಎರಡು ವಾರ ಮುಂದೂಡಿ ಆದೇಶ ಹೊರಡಿಸಲಾಗಿತ್ತು. ಪ್ರಜ್ವಲ್ ರೇವಣ್ಣ ಕೇಸ್ ಬಳಿಕ ರೇವಣ್ಣ ಫ್ಯಾಮಿಲಿಗೆ ಸಂಕಷ್ಟದ ಮೇಲೆ ಸಂಕಷ್ಟ ಬರುತ್ತಿದೆ. ಮಹಿಳೆ ಕಿಡ್ನ್ಯಾಪ್ ಕೇಸ್ನಲ್ಲಿ ರೇವಣ್ಣ 10 ದಿನ ಜೈಲು ಅನುಭವಿಸಿ ಬೇಲ್ ಮೇಲೆ ಆಚೆ ಬಂದಿದ್ದಾರೆ. ಅದೇ ಕೇಸ್ನಲ್ಲಿ ಪತ್ನಿ ಭವಾನಿ ಷರತ್ತು ಬದ್ದ ಜಾಮೀನಿನ ಮೇಲೆ ಹೊರಗಿದ್ದಾರೆ. ಕಿರಿಯ ಮಗ ಈಗಾಗಲೇ ಅತ್ಯಾಚಾರ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.