ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11, 12ನೇ ವಾರಕ್ಕೆ ಕಾಲಿಡಲು ಸಜ್ಜಾಗಿದೆ. ಇದೇ ಹೊತ್ತಲ್ಲಿ ಬಿಗ್ಬಾಸ್ ಮನೆಯಿಂದ ಆಚೆ ಹೋಗಲು ಒಟ್ಟು 8 ಮಂದಿ ನಾಮಿನೇಟ್ ಆಗಿದ್ದಾರೆ. ಹೌದು, ಪ್ರತಿ ವಾರದಂತೆ ಈ ಬಾರಿಯೂ ಬಿಗ್ಬಾಸ್ ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ.
ಆದರೆ ಈ ಬಾರಿಯ ನಾಮಿನೇಷನ್ ಪ್ರಕ್ರಿಯೆಯೂ ಬಹಳ ವಿಭಿನ್ನವಾಗಿ ನಡೆದಿತ್ತು. ಕಳೆದ ಸೀಸನ್ ಎಂದರೆ ಬಿಗ್ಬಾಸ್ 10ರ ಸ್ಪರ್ಧಿಗಳ ಆಗಮನವಾಗಿತ್ತು. 72ನೇ ದಿನಕ್ಕೆ ಕಾಲಿಟ್ಟ ಬಿಗ್ಬಾಸ್ ಸೀಸನ್ 11ಕ್ಕೆ ಹಳೆಯ ಸ್ಪರ್ಧಿಗಳ ಎಂಟ್ರಿ ಕೊಟ್ಟು ನಾಮಿನೇಷನ್ ಪ್ರಕ್ರಿಯೆ ನಡೆಸಿದ್ದಾರೆ.
ಮೊದಲು ಡ್ರೋನ್ ಪ್ರತಾಪ್ ಹಾಗೂ ತನಿಷಾ ಕುಪ್ಪಂಡ ಬಂದಿದ್ದರು. ಇದಾದ ಬಳಿಕ ತುಕಾಲಿ ಸಂತೋಷ್ ಹಾಗೂ ವರ್ತೂರು ಸಂತೋಷ್ ಆಗಮನವಾಗಿತ್ತು. ಕೊನೆಯದಾಗಿ ನಮ್ರತಾ ಗೌಡ ಹಾಗೂ ಕಾರ್ತಿಕ್ ಮಹೇಶ್ ಎಂಟ್ರಿ ಕೊಟ್ಟಿದ್ದರು. ಇವರು ಬಂದು ತಲಾ ಇಬ್ಬರು ಸ್ಪರ್ಧಿಗಳಿಗೆ ನಾಮಿನೇಟ್ ಮಾಡುವ ಅಧಿಕಾರ ಕೊಟ್ಟಿದ್ದರು.
ಇನ್ನೂ ಈ ವಾರ ಬಿಗ್ಬಾಸ್ ಮನೆಯಿಂದ ಆಚೆ ಹೋಗಲು ಒಟ್ಟು 8 ಮಂದಿ ನಾಮಿನೇಟ್ ಆಗಿದ್ದಾರೆ. ಅದರಲ್ಲಿ ಭವ್ಯಾ ಗೌಡ, ಶಿಶಿರ್, ತ್ರಿವಿಕ್ರಮ್, ರಜತ್, ಧನರಾಜ್ ಆಚಾರ್ಯ, ಹನುಮಂತ ಹಾಗೂ ಚೈತ್ರಾ ಕುಂದಾಪುರ ನಾಮಿನೇಟ್ ಆಗಿದ್ದಾರೆ. ಜೊತೆಗೆ ಕ್ಯಾಪ್ಟನ್ ಗೌತಮಿ ಜಾಧವ್ ನೇರವಾಗಿ ಮೋಕ್ಷಿತಾ ಪೈ ನಾಮಿನೇಟ್ ಆಗಿದ್ದಾರೆ. ಇನ್ನೂ ಈ 8 ಮಂದಿ ಪೈಕಿ ಈ ವಾರ ಬಿಗ್ಬಾಸ್ ಮನೆಯಿಂದ ಯಾವ ಸ್ಪರ್ಧಿ ಆಚೆ ಹೋಗಲಿದ್ದಾರೆ ಎಂದು ಕಾದು ನೋಡಬೇಕಿದೆ. ಆದರೆ ಇದರ ಮಧ್ಯೆ ಕಳೆದ ವಾರ ಯಾವ ಸ್ಪರ್ಧಿ ಎಲಿಮಿನೇಟ್ ಆಗಿರಲಿಲ್ಲ. ಆದರೆ ಈ ವಾರ ಡಬಲ್ ಎಲಿಮಿನೇಷನ್ ಇರುತ್ತಾ? ಅಥವಾ ಕೊನೆಯ ಕ್ಷಣದಲ್ಲಿ ಮತ್ತೆ ಬಿಗ್ಬಾಸ್ ಟ್ವಿಸ್ಟ್ ಕೊಡಲಿದ್ದಾರಾ ಅಂತ ತಿಳಿದು ಬರಲಿದೆ.