‘ಬಿಗ್ ಬಾಸ್ ಕನ್ನಡ ಸೀಸನ್ 7′, ‘ಲಕ್ಷ್ಮಿ ನಿವಾಸ’ ಖ್ಯಾತಿಯ ಚಂದನಾ ಅನಂತಕೃಷ್ಣ ಅವರು ಅಭಿಮಾನಿಗಳಿಗೆ ಶುಭ ಸುದ್ದಿ ಕೊಟ್ಟಿದ್ದಾರೆ. ಉದ್ಯಮಿ ಪ್ರತ್ಯಕ್ಷ್ ಎಂಬುವವರ ಜೊತೆ ಹಸೆಮಣೆ ಏರಲು ನಟಿ ಸಜ್ಜಾಗಿದ್ದಾರೆ. ಕನ್ನಡ ಕಿರುತೆರೆಯಲ್ಲೇ ಲಕ್ಷ್ಮೀ ನಿವಾಸ ಧಾರಾವಾಹಿ ವಿಭಿನ್ನವಾಗಿ ಮೂಡಿ ಬರ್ತಿದೆ. ಪ್ರತಿ ಪಾತ್ರಕ್ಕೂ ಅದರದ್ದೇ ಆದ ತೂಕ, ವ್ಯಕ್ತಿತ್ವ ಇದ್ದು, ನಿರ್ದೇಶಕರು ಅದನ್ನು ಅಚ್ಚುಕಟ್ಟಾಗಿ ಪ್ರೆಸೆಂಟ್ ಮಾಡುತ್ತಿದ್ದಾರೆ. ಹೀಗಾಗಿನೇ ಅಪಾರ ವೀಕ್ಷಕರನ್ನ ಸಂಪಾದಿಸಿದೆ ಸೀರಿಯಲ್. ಅದರಲ್ಲೂ ಜಾಹ್ನವಿ ಪಾತ್ರದ ಮೂಲಕ ಸೀರಿಯಲ್ ಪ್ರಿಯರ ಮನಸ್ಸು ಗೆದ್ದಿರೋ ನಟಿ ಚಂದನಾ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಇದೇ ತಿಂಗಳು ಉದ್ಯಮಿ ಪ್ರತ್ಯಕ್ಷ್ ಜೊತೆ ಇದೇ ನವೆಂಬರ್ 28ಕ್ಕೆ ಬೆಂಗಳೂರಿನಲ್ಲಿ ಚಂದನಾ ಮದುವೆ ಜರುಗಲಿದೆ. ಈ ಮದುವೆಯಲ್ಲಿ ಕುಟುಂಬಸ್ಥರು, ಆಪ್ತರು, ಕಿರುತೆರೆಯ ಕಲಾವಿದರು ಭಾಗಿಯಾಗಲಿದ್ದಾರೆ.
ಇದನ್ನು ಓದಿ:ಯುದ್ಧ ಮಾಡದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್..!
ಇನ್ನೂ ಪ್ರತ್ಯಕ್ಷ್ ಅವರು ಉದ್ಯಮಿಯಾಗಿದ್ದಾರೆ. ವಿಶೇಷ ಅಂದರೆ, ಪ್ರತ್ಯಕ್ಷ್ ಪೋಷಕರು ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ದಿವಂಗತ ಉದಯ್ ಹುತ್ತಿನಗದ್ದೆ ಅವರು ಡಾ.ರಾಜ್ಕುಮಾರ್ ಜೊತೆ ‘ದೇವತಾ ಮನುಷ್ಯ’ ಚಿತ್ರದಲ್ಲಿ ನಟಿಸಿದ್ದರು. ‘ಆರಂಭ’, ‘ಅಗ್ನಿಪರ್ವ’, ‘ಶುಭ ಮಿಲನ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದರು. ಅವರ ಪತ್ನಿ ಲಲಿತಾಂಜಲಿ ಉದಯ್ ಕೂಡ ಹಿರಿತೆರೆ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ.
ಇನ್ನೂ ನಟಿ ಚಂದನಾ ಅನಂತಕೃಷ್ಣ ಅವರು ಬಿಗ್ಬಾಸ್ ಸೀಸನ್-7, ಡ್ಯಾನ್ಸಿಂಗ್ ಚಾಂಪಿಯನ್, ಭರ್ಜರಿ ಬ್ಯಾಚುಲರ್ಸ್ ಶೋ ಸ್ಪರ್ಧಿ ಕೂಡ ಆಗಿದ್ದರು. ಹಾಡು ಕರ್ನಾಟಕ ಸಿಂಗಿಂಗ್ ಶೋನಲ್ಲಿ ಚಂದನಾ ಆ್ಯಂಕರ್ ಆಗಿದ್ದರು. ರಾಜಾರಾಣಿ, ಹೂಮಳೆ ಸೀರಿಯಲ್ನಲ್ಲಿ ನಟಿಸಿದ್ದ ನಟಿ ಚಂದನಾ ಅವರು ಸದ್ಯ ಲಕ್ಷ್ಮೀ ನಿವಾಸ ಸೀರಿಯಲ್ನಲ್ಲಿ ನಟಿಸುತ್ತಿದ್ದಾರೆ. ಸದ್ಯ ಇದೇ ಸುದ್ದಿ ಕೇಳಿದ ಅಭಿಮಾನಿಗಳು ನಟಿಗೆ ಶುಭ ಹಾರೈಸುತ್ತಿದ್ದಾರೆ.