ದರ್ಶನ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚಾರ್ಜ್ಶೀಟ್ನಲ್ಲಿನ ಗೌಪ್ಯ ಮಾಹಿತಿ ಬಹಿರಂಗಪಡಿಸದಂತೆ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಚಾರ್ಜ್ಶೀಟ್ನಲ್ಲಿ ಉಲ್ಲೇಖವಾದ ವಿಚಾರಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸಬಾರದು ಎಂದು ದರ್ಶನ್ ಅವರು ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಗೆ ಸಂಬಂಧಿಸಿದಂತ ಗೃಹ ಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಚಾರ್ಜ್ಶೀಟ್ ಅನ್ನೋದು ಸಾರ್ವಜನಿಕ ಅರ್ಜಿ. ಅದನ್ನು ಎಲ್ಲಾ ಆರೋಪಿಗಳ ವಕೀಲರಿಗೆ ನೀಡಲಾಗುತ್ತದೆ. ಈ ಬಗ್ಗೆ ಕೋರ್ಟ್ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತದೆ ನೋಡಬೇಕಿದೆ’ ಎಂದಿದ್ದಾರೆ ಪರಮೇಶ್ವರ್.