- ಪ್ರದೀಪ್ ಈಶ್ವರ್ ಮನೆ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ
- ಡಾ.ಕೆ ಸುಧಾಕರ್ ಗೆಲುವು ಪಡೆದ ಹಿನ್ನೆಲೆ ಶಾಸಕರ ಮನೆ ಮೇಲೆ ಕಲ್ಲು ತೂರಾಟ
- ಚಿಕ್ಕಬಳ್ಳಾಪುರ ಪೊಲೀಸರು ಶಾಸಕರ ಮನೆಗೆ ಭೇಟಿ, ಪರಿಶೀಲನೆ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಡಾ.ಕೆ ಸುಧಾಕರ್ ಗೆಲುವು ಪಡೆದ ಹಿನ್ನೆಲೆಯಲ್ಲಿ ಶಾಸಕರ ಮನೆ ಮೇಲೆ ಕಲ್ಲು ತೂರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಪ್ರದೀಪ್ ಈಶ್ವರ್ ಅವರ ನಿವಾಸದ ಮೇಲೆ ಯಾರೋ ಕಿಡಿಗೇಡಿಗಳು ರಾತ್ರಿ ವೇಳೆ ಮನೆ ಮೇಲೆ ಕಲ್ಲುಗಳನ್ನು ಎಸೆದಿದ್ದಾರೆ. ಇದರಿಂದ ಶಾಸಕರ ಮನೆಯ ಕಿಟಕಿಗಳ ಗಾಜುಗಳು ಒಡೆದು ಹೋಗಿವೆ. ಚಿಕ್ಕಬಳ್ಳಾಪುರ ನಗರದ ಠಾಣೆ ಪೊಲೀಸರು ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.