”ಆ ದಿನಗಳು” ಚಿತ್ರದ ಮೂಲಕ ಹೆಸರು ಮಾಡಿ ಹೀರೋ ಅನ್ನಿಸಿಕೊಂಡವರು ಚೇತನ್. ಬಹುಶಃ ʻ ಮೈನಾ , ʻಆ ದಿನಗಳುʼ ಸಿನಿಮಾ ತಂದುಕೊಟ್ಟ ಕೀರ್ತಿಯನ್ನು ಸರಿಯಾಗಿ ಬಳಸಿಕೊಂಡಿದ್ದಿದ್ದರೆ ಈಷ್ಟೊತ್ತಿಗೆ ಕನ್ನಡದ ಪ್ರಮುಖ ಹೀರೋಗಳಲ್ಲಿ ನಿಸ್ಸಂಶಯವಾಗಿ ಚೇತನ್ ಒಬ್ಬರಾಗುತ್ತಿದ್ದರು. ಆದರೆ, ಚೇತನ್ ತಮ್ಮ ಟ್ರ್ಯಾಕ್ ಬದಲಿಸಿದರು. ಅಮೆರಿಕದಲ್ಲಿ ಹುಟ್ಟಿಬೆಳೆದು ಬಂದ ಚೇತನ್ ಚಿತ್ರರಂಗದಿಂದ ಅಂತರ ಕಾಪಾಡಿಕೊಂಡು ಪ್ರಗತಿಪರ ಚಿಂತಕರಾದರು. ಭಾಷಣ ಮಾಡುವುದನ್ನೂ ಕಲಿತರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವೈಫಲ್ಯಗಳನ್ನು ಅಂಜದೇ ಅಳುಕದೇ ಹೇಳಲು ಶುರು ಮಾಡಿದರು. ಬಲಪಂಥೀಯರ ಕೆಂಗಣ್ಣಿಗೆ ಗುರಿಯಾದರು. ಎರಡೆರಡು ಬಾರಿ ಜೈಲಿಗೆ ಕೂಡ ಹೋಗಿ ಬಂದರು.
ಇಂಥಾ ಚೇತನ್ ಅತ್ತ ದರ್ಶನ್ ತಮಗೆ ಮನೆಯೂಟ ಬೇಕು ಎಂದು ಪಟ್ಟು ಹಿಡಿದ ಬೆನ್ನಲ್ಲಿಯೇ, ತಮ್ಮ ಜೈಲಿನ ಅನುಭವವನ್ನು ಹಂಚಿಕೊಂಡರು. ಚಿತ್ರರಂಗದಲ್ಲಿ ಮೌನ ಬಿಟ್ಟು ಸತ್ಯ ಹೇಳುವ ಕೆಲಸವನ್ನು ಎಲ್ಲರೂ ಮಾಡಬೇಕು, ಇನ್ನೂ.. ರೇಣುಕಾಸ್ವಾಮಿ ಪವಿತ್ರಾಗೆ ಅಶ್ಲೀಲ ಮೆಸೇಜ್ ಮಾಡಿದ್ದು ನಂಬ್ತೀವಿ, ಆದರೆ ಅದೇ ದರ್ಶನ್ ಕೊಲೆ ಆರೋಪಿ ಅಂದ್ರೆ ನಂಬಲ್ಲ, ಹೀಗಾಗಿಯೇ ಸ್ಟಾರ್ ಸಂಸ್ಕೃತಿ ಅನ್ನೋದು ಅಳಿಸಬೇಕು ಎಂದಿರುವ ಚೇತನ್ ಅಹಿಂಸಾ, ದರ್ಶನ್ ಅವರ ಘಟನೆ ಕನ್ನಡ ಚಿತ್ರರಂಗಕ್ಕೆ ಕಪ್ಪು ಚುಕ್ಕೆ, ಚಿತ್ರರಂಗದ ನಾವೆಲ್ಲ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದಿದ್ದಾರೆ. ದರ್ಶನ್ ಆರೋಪಿಯಷ್ಟೇ ಅಪರಾಧಿಯಲ್ಲ ಆದರೆ ಅವರ ಮೇಲೆ ಗಂಭೀರ ಆರೋಪ ಇದೆ ಎಂದು ಕೂಡ ಹೇಳಿದ್ದಾರೆ.