ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ವರದಿಯಾಗಿದೆ. ವರದಿ ಪ್ರಕಾರ ದರ್ಶನ್ ಅವರು ಅಸ್ವಸ್ಥರಾಗಿ ಮೂರ್ಛೆ ಹೋಗಿದ್ದರು. ತಲೆ ಸುತ್ತಿ ಬಿದ್ದಿದ್ದರು ಎಂದು ವರದಿಯಾಗಿದೆ. ಈ ಸುದ್ದಿ ಅಭಿಮಾನಿಗಳಲ್ಲಿ ಮತ್ತು ದರ್ಶನ್ ಆಪ್ತರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಆದರೆ ಈಗ ದರ್ಶನ್ ಆರೋಗ್ಯ ಚೆನ್ನಾಗಿದೆ ಯಾರೂ ಚಿಂತಿಸುವ ಅಗತ್ಯವಿಲ್ಲ. ದರ್ಶನ್ ಬಗ್ಗೆ ಸಾರ್ವಜನಿಕವಾಗಿ ಅಭಿಮಾನಿಗಳಿಗೆ ನೋವುಂಟು ಮಾಡುವ ಸುದ್ದಿಗಳನ್ನು ಹಂಚಿಕೊಳ್ಳಬಾರದು. ಪರಿಶೀಲಿಸದೆ ಯಾವುದೇ ಸುದ್ದಿಯನ್ನು ಹಂಚಿಕೊಳ್ಳಬೇಡಿ ಎಂದು ಸುಳ್ಳು ವದಂತಿಗಳಿಗೆ ತಲೆ ಕಡೆಸಿಕೊಳ್ಳಬೇಡಿ ಎಂದು ಅಭಿಮಾನಿಗಳು ಹೇಳಿದ್ದಾರೆ.
ತಪ್ಪು ಮಾಹಿತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದರ್ಶನ್ ಅಭಿಮಾನಿಗಳು ಒತ್ತಾಯಿಸಿದ್ದಾರೆ. ಮಾಹಿತಿಯನ್ನು ಆನ್ಲೈನ್ನಲ್ಲಿ ಹಂಚಿಕೊಳ್ಳುವ ಮೊದಲು ಪರಿಶೀಲಿಸುವುದು ಮುಖ್ಯವಾಗಿದೆ ಎಂದು ಮನವಿ ಮಾಡಿಕೊಂಡಿದ್ದಾರೆ. ಕೊಲೆ ಕೇಸ್ ಬಳಿಕ ನಟ ದರ್ಶನ್ ಚಿಂತಿತರಾಗಿದ್ದು, ಮನೆ ಊಟದ ಸೌಲಭ್ಯ ಸಿಕ್ಕಿಲ್ಲ. ಜೈಲೂಟ ಒಗ್ಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ದೇಹ ಸಂಪೂರ್ಣ ಇಳಿದು ಹೋಗಿದೆ ಎನ್ನಲಾಗಿದೆ. ಜೈಲಿನಲ್ಲಿ ಪುಸ್ತಕಗಳನ್ನು ಓದುತ್ತಾ, ಧ್ಯಾನ ಮಾಡುತ್ತಾ ಸಮಯ ಕಳೆಯುತ್ತಿದ್ದಾರಂತೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎ2 ಆರೋಪಿಯಾಗಿದ್ದು, ಆತನ ಆಪ್ತ ಸ್ನೇಹಿತೆ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದು, ಇತರೆ 15 ಮಂದಿ ಜೈಲಿನಲ್ಲಿದ್ದಾರೆ.
ಇದೀಗ ರೇಣುಕಾಸ್ವಾಮಿ ಕೊಲೆ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ರೇಣುಕಾ ಸ್ವಾಮಿ ಕೊಲೆ ನಡೆದ ದಿನ ಪವಿತ್ರ ಗೌಡ ಧರಿಸಿದ್ದ ಬಟ್ಟೆಯನ್ನು ಸಂಗ್ರಹಿಸಿ FSL ವರದಿಗೆ ಕಳುಹಿಸಲಾಗಿತ್ತು, ಆದರೆ ಈಗ FSL ರಿಪೋರ್ಟ್ ಬಂದಿದ್ದು ಪವಿತ್ರ ಗೌಡ ಚಪ್ಪಲಿಯ ಮೇಲೆ ರೇಣುಕಾ ಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ. ಒಂದು ಬಿಯರ್ ಬಾಟಲಿ ಮೇಲೆ ರಕ್ತದ ಕಲೆ ಪತ್ತೆಯಾಗಿದೆ. ಆರೋಪಿಯೊಬ್ಬನ ಫಿಂಗರ್ ಪ್ರಿಂಟ್ ಕೂಡ ಇದ್ದು, ತನಿಖೆ ನಡೆಯುತ್ತಿದೆ. ಸದ್ಯ ಬಿಯರ್ ಬಾಟಲಿಯನ್ನು ಪ್ರಮುಖ ಸಾಕ್ಷಿಯಾಗಿ ಮಾಡಿರುವ ಪೊಲೀಸರು, ಇನ್ನೂ ಹೆಚ್ಚಿನ ಸಾಕ್ಷಿಗಳ ಹುಡುಕಾಟದಲ್ಲಿದ್ದಾರೆ.