ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ನಟ ದರ್ಶನ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದಾದ ಬಳಿಕ ಸ್ಯಾಂಡಲ್ವುಡ್ ನಟ ದರ್ಶನ್ ಅವರ ಪರ ವಕೀಲರು ಜಾಮೀನು ಕೋರಿ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ ಅವರಿಗೆ ಮಂಗಳವಾರ (ಅಕ್ಟೋಬರ್ 22) ಮಹತ್ವದ ದಿನವಾಗಿದ್ದು, ಕರ್ನಾಟಕ ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಒಂದು ವೇಳೆ ಜಾಮೀನು ಮಂಜೂರು ಆದರೆ, ನಟ ದರ್ಶನ್ ಅವರು ಜೈಲಿನಿಂದ ಹೊರಬರಲಿದ್ದು, ದಾಸನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಗಲಿದೆ.
ನಟ ದರ್ಶನ್ ಪರ ವಕೀಲ ಎಸ್ ಸುನಿಲ್ ಕುಮಾರ್ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಇಂದು (ಮಂಗಳವಾರ) ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನ್ಯಾ. ಎಸ್. ವಿಶ್ವಜೀತ್ ಅವರಿದ್ದ ಹೈಕೋರ್ಟ್ ಏಕ ಸದಸ್ಯಪೀಠ ಈ ಒಂದು ವಿಚಾರಣೆ ನಡೆಸಲಿದೆ. ಈಗಾಗಲೇ ಕೊಲೆ ಪ್ರಕರಣದಲ್ಲಿ ಹಲವು ಆರೋಪಿಗಳಿಗೆ ಜಾಮೀನು ದೊರೆತಿದೆ. ಆದರೆ ಪ್ರಕರಣದ A1 ಆರೋಪಿ ಪವಿತ್ರಾಗೌಡ ಹಾಗೂ ನಟ ದರ್ಶನ್ ಸೇರಿದಂತೆ ಇನ್ನೂ ಕೆಲವು ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿಲ್ಲ ಹಾಗಾಗಿ ಇದೇ ಅಕ್ಟೋಬರ್ 22ರಂದು ನಟ ದರ್ಶನ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹಾಗಾಗಿ ಇಂದು ಅವರಿಗೆ ಮಹತ್ವದ ದಿನವಾಗಿದೆ ಎಂದು ಹೇಳಲಾಗುತ್ತಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಿಂದಾಗಿ ನಟ ದರ್ಶನ್ ಕಳೆದ 120 ದಿನಗಳಿಂದ ಜೈಲುವಾಸದಲ್ಲಿದ್ದಾರೆ. ಇತ್ತ ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದು, ಅಗತ್ಯ ಚಿಕಿತ್ಸೆ ಪಡೆಯಲು ಜಾಮೀನು ಮಂಜೂರು ಮಾಡಬೇಕು ಎಂದು ಕೋರಲಿದ್ದಾರೆ.
ಜೂನ್ 8 ರಂದು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆಯ್ತು. ಈ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಜೂನ್ 11 ರಂದು ನಟ ದರ್ಶನ್ ಅವರ ನ್ಯಾಯಾಂಗ ಬಂಧನವಾಗಿದೆ. ಜೂನ್ 23 ರಂದು ನಟ ದರ್ಶನ್ ಎರಡನೇ ಬಾರಿಗೆ ಜೈಲು ಸೇರಿದ್ದರು. ಮೊದಲಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟ ಅಲ್ಲಿ ಅನಧಿಕೃತ ಸೌಲಭ್ಯ ಪಡೆದು, ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾದ ಹಿನ್ನೆಲೆ ಬಳ್ಳಾರಿ ಜೈಲಿಗೆ ನಟ ದರ್ಶನ್ ಅವರನ್ನ ಆಗಸ್ಟ್ 31 ರಂದು ವರ್ಗಾವಣೆಯಾಗಿದ್ದರು. ಜಾಮೀನು ಅರ್ಜಿ ವಜಾ ಆದರೆ ಮುಂದೇನು? ನಟ ದರ್ಶನ್ ಅವರ ಬೇಲ್ ಅರ್ಜಿಯು ಇಂದು ಹೈಕೋರ್ಟ್ನ ಏಕಸದಸ್ಯ ಪೀಠದ ಮುಂದೆ ವಿಚಾರಣೆ ನಡೆಯಲಿದೆ. ಹೈಕೋರ್ಟ್ ನಲ್ಲಿಯೂ ದಾಸನ ಅರ್ಜಿ ವಜಾ ಆದರೆ, ದ್ವಿಸದಸ್ಯ ಪೀಠ ಅಥವಾ ತ್ರಿಸದಸ್ಯ ಪೀಠ, ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಬಹುದು. ಇಲ್ಲಿಯೂ ಸಿಗದಿದ್ದರೆ ಸುಪ್ರೀಂ ಕೋರ್ಟ್ ತೆರಳುವ ಅವಕಾಶ ಇದೆ.