ಕನ್ನಡದ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ಅವರು ತಾಯಿ ಆಗುತ್ತಿದ್ದಾರೆ. ತುಂಬು ಗರ್ಭಿಣಿ ಆಗಿರುವ ಅವರು ಶೀಘ್ರದಲ್ಲೇ ಮೊದಲ ಮಗುವಿಗೆ ಜನ್ಮ ನೀಡಲಿದ್ದಾರೆ. ಹಾಗಾಗಿ ‘ಹಗ್ಗ’ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಅವರಿಗೆ ಸೀಮಂತ ಮಾಡಲಾಯಿತು. ಈ ವೇಳೆ ನಟಿಯರಾದ ಅನು ಪ್ರಭಾಕರ್, ಪ್ರಿಯಾಂಕಾ ಉಪೇಂದ್ರ ಮುಂತಾದವರು ಹಾಜರಿದ್ದರು.
‘ಹಗ್ಗ’ ಸಿನಿಮಾದ ಟ್ರೇಲರ್ ರಿಲೀಸ್ ಮಾಡಲಾಗಿದೆ. ಟ್ರೇಲರ್ ಮೂಲಕ ನಿರೀಕ್ಷೆ ಹೆಚ್ಚಿಸಿದ ಈ ಸಿನಿಮಾದಲ್ಲಿ ಅನು ಪ್ರಭಾಕರ್, ಹರ್ಷಿಕಾ ಪೂಣಚ್ಚ, ವೇಣು, ತಬಲಾ ನಾಣಿ ಮುಂತಾದವರು ನಟಿಸಿದ್ದಾರೆ. ಟ್ರೇಲರ್ ಬಿಡುಗಡೆ ಕಾರ್ಯಕ್ರಮದ ವೇದಿಕೆಯಲ್ಲಿ ಹರ್ಷಿಕಾ ಪೂಣಚ್ಚ ಅವರಿಗೆ ಸೀಮಂತ ಮಾಡಿದ್ದು ವಿಶೇಷವಾಗಿತ್ತು. ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ದಂಪತಿ ಈಗ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ.