ಳೆದ ನಾಲ್ಕೈದು ದಿನಗಳಿಂದ ಕೊಂಚ ವಿರಾಮ ನೀಡಿದ್ದ ವರುಣದೇವ ಈಗ ಮತ್ತೆ ತನ್ನ ಆರ್ಭಟ ಶುರುಮಾಡಲು ಮುಂದಾಗಿದ್ದಾನೆ. ನವೆಂಬರ್ 1 (ಶುಕ್ರವಾರ) ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಚಾಮರಾಜನಗರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮತ್ತು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇದನ್ನು ಓದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಡಾಲಿ!
ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಇನ್ನು, ನಾಳೆ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮತ್ತು ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇದನ್ನು ಓದಿ: ವೈದ್ಯೆ ಕೈ ಹಿಡಿಯುತ್ತಿದ್ದಾರೆ ನಟ ಧನಂಜಯ.. ಮದುವೆ ಯಾವಾಗ..? ಎಲ್ಲಿ..?