ಕರ್ನಾಟಕ ಬ್ಯಾಂಕ್ ಲಿಮಿಟೆಡ್ ಖಾಲಿಯಿರುವ ಗ್ರಾಹಕ ಸೇವಾ ಸಹಾಯಕ ಹುದ್ದೆ / ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿದ್ದಾರೆ. ಬ್ಯಾಂಕ್ನಲ್ಲಿ ಕೆಲಸ ಮಾಡಲು ಬಯಸುವ ಆಸಕ್ತ ಅಭ್ಯರ್ಥಿಗಳಿಗೆ ಇಲ್ಲೊಂದು ಸಿಹಿ ಸುದ್ದಿಯಿದೆ. ಕರ್ನಾಟಕ ಬ್ಯಾಂಕ್ ಗ್ರಾಹಕ ಸೇವಾ ಸಹಾಯಕ ಹುದ್ದೆ / ಕ್ಲರ್ಕ್ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಯಾವುದೇ ಪದವೀಧರರು ಈ ತಿಂಗಳೊಳಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಯ ವಿವರ
- ನೇಮಕಾತಿ ಬ್ಯಾಂಕ್ : ಕರ್ನಾಟಕ ಬ್ಯಾಂಕ್ ಲಿಮಿಟೆಡ್
- ಹುದ್ದೆ ಹೆಸರು : ಗ್ರಾಹಕ ಸೇವಾ ಸಹಾಯಕ ಹುದ್ದೆ / ಕ್ಲರ್ಕ್
- ಹುದ್ದೆಗಳ ಸ್ಥಳ : ಬ್ಯಾಂಕ್ನ ದೇಶದಾದ್ಯಂತ ಕಚೇರಿಗಳು, ಶಾಖೆಗಳಲ್ಲಿ ಉದ್ಯೋಗ ಮಾಡುವ ಅವಕಾಶ.
- ವೇತನ ಶ್ರೇಣಿ : ರೂ 24,050 – ರೂ 64,480.
ವಿದ್ಯಾರ್ಹತೆ ಹಾಗೂ ವಯಸ್ಸಿನ ಅರ್ಹತೆಗಳು
- ಯಾವುದೇ ವಿಷಯದಲ್ಲಿ ಪದವಿ ಶಿಕ್ಷಣವನ್ನು ಅಂಗೀಕೃತ ವಿಶ್ವವಿದ್ಯಾಲಯ / ಸಂಸ್ಥೆಗಳು / ಬೋರ್ಡ್ ನಿಂದ ಪಡೆದಿರಬೇಕು.
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 26 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ
- ಆನ್ಲೈನ್ ಪರೀಕ್ಷೆ
- ಸಂದರ್ಶನ
- ಆನ್ಲೈನ್ ಪರೀಕ್ಷೆಗಳು ಬೆಂಗಳೂರು, ಚೆನ್ನೈ, ಮುಂಬೈ, ನವದೆಹಲಿ, ಹೈದರಾಬಾದ್, ಕೋಲ್ಕತ್ತಾ, ಪುಣೆ, ಮಂಗಳೂರು, ಧಾರವಾಡ ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ ಮತ್ತು ಕಲಬುರ್ಗಿಯಲ್ಲಿ ನಡೆಯಲಿದೆ.
ಅರ್ಜಿ ಶುಲ್ಕ
- ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ ರೂ 700 ಅರ್ಜಿ ಶುಲ್ಕ ಹಾಗೂ ಎಸ್ ಸಿ / ಎಸ್ ಟಿ ಅಭ್ಯರ್ಥಿಗಳಿಗೆ ರೂ 600 ಅರ್ಜಿ ಶುಲ್ಕವಿರುತ್ತದೆ. ಅರ್ಜಿ ಪ್ರಕ್ರಿಯೆಯಲ್ಲಿ ಶುಲ್ಕವನ್ನು ಆನ್ಲೈನ್ನಲ್ಲಿಯೇ ಪಾವತಿಸಬೇಕು.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ನವೆಂಬರ್ 20, 2024
- ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಗೆ ಕೊನೆಯ ದಿನಾಂಕ : ನವೆಂಬರ್ 30, 2024
- ಪರೀಕ್ಷೆಯ ತಾತ್ಕಾಲಿಕ ದಿನಾಂಕ: ಡಿಸೆಂಬರ್ 15, 2024