ಮಧ್ಯಾಹ್ನ ಊಟದ ವೇಳೆ ಸತ್ತ ಹಲ್ಲಿಯೊಂದು ಸಿಕ್ಕ ಘಟನೆ ಒಡಿಶಾದ ಬಾಲಸೋರ್ನಲ್ಲಿ ನಡೆದಿದೆ. ಅಲ್ಲಿನ ಸಿರಾಪುರ ಗ್ರಾಮದ ಉದಯನಾರಾಯಣ ಶಾಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಆಹಾರದಲ್ಲಿ ಸತ್ತ ಹಲ್ಲಿ ಕಂಡುಬಂದ ಹಿನ್ನೆಲೆ ಶಾಲಾ ಶಿಕ್ಷಕರು ಊಟ ವಿತರಣೆ ಮಾಡುವುದನ್ನು ಸ್ಥಗಿತಗೊಳಿಸಿದ್ದಾರೆ. ಊಟ ಮಾಡದಂತೆ ಹೇಳಿದ್ದಾರೆ.
ಅತ್ತ ಊಟ ಸೇವಿಸಿದ ಹಲವು ವಿದ್ಯಾರ್ಥಿಗಳು ಹೊಟ್ಟೆ ನೋವು, ವಾಂತಿ ಮತ್ತು ಎದೆ ನೋವಿನಿಂದ ಬಳಲಿದ್ದಾರೆ. ತಕ್ಷಣ ಅವರನ್ನು ಆ್ಯಂಬುಲೆನ್ಸ್ ಮತ್ತು ಇತರೆ ವಾಹನದ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಘಟನೆಯ ಬಗ್ಗೆ ತಿಳಿದ ಸ್ಥಳೀಯ ಶಾಸಕ ಮಾಧವ್ ಧಾಡಾ, ಶಾಲಾ ಆಡಳಿತ ಮಂಡಳಿ ಜೊತೆಗೆ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ವಿದ್ಯಾರ್ಥಿಗಳ ಪರಿಸ್ಥಿತಿಯನ್ನು ಗಮನಿಸಿದ್ದಾರೆ.