ನಂತರ ಸತತ ಸುರಿಯುತ್ತಿರವ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಬೆಕ್ಕಿನಕೇರಿ ಗ್ರಾಮಕ್ಕೆ ಭೇಟಿ ನೀಡಿ, ಹಾನಿಗೊಳಗಾಗಿರುವ ಸ್ಥಳಗಳ ಬಗ್ಗೆ ಮಾಹಿತಿ ಪಡೆದರು. ಎಲ್ಲವನ್ನೂ ಪರಿಶೀಲನೆ ನಡೆಸಿದ ಸಚಿವರು, ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸಿದರು. ಕೆಲವು ಸಂತ್ರಸ್ತರಿಗೆ ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಆರ್ಥಿಕ ನೆರವು ನೀಡಿದರು.
ಈ ಸಂದರ್ಭದಲ್ಲಿ ತಹಶಿಲ್ದಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಾಧಿಕಾರಿ, ಕಂದಾಯ ನಿರೀಕ್ಷಕರು ಹಾಗೂ ಇನ್ನಿತರ ಇಲಾಖೆಯ ಅಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಎಡೆಬಿಡದೆ ಮಳೆಯಲ್ಲೂ ನಿರಂತರವಾಗಿ ಜನರೆಡೆಗೆ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ನಡೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಜನರ ಕಷ್ಟಕ್ಕೆ ಸ್ಪಂದಿಸುವ ಮೂಲಕ ಎಲ್ಲ ಸಂದರ್ಭದಲ್ಲೂ ಜನರ ಜೊತೆ ನಾನಿದ್ದೇನೆ ಎನ್ನುವ ಸಂದೇಶವನ್ನು ಸಚಿವರು ನೀಡುತ್ತಿದ್ದಾರೆ.