ಕೋಲ್ಕತ್ತಾದ ಆರ್ಜಿ ಕಾರ್ ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನಾ ಪೋಸ್ಟ್ಗಳನ್ನು ಮಾಡಿದ್ದ ಅಲ್ಲಿನ ನಟಿ ಮಿಮಿ ಚಕ್ರವರ್ತಿಗೆ ಅತ್ಯಾಚಾರ ಬೆದರಿಕೆಗಳು ಬಂದಿವೆ. ಪೋಸ್ಟ್ ಪ್ರಕಟಿಸಿದ ನಂತರ ತಮಗೆ ಅತ್ಯಾಚಾರ ಬೆದರಿಕೆಗಳು ಮತ್ತು ಅಶ್ಲೀಲ ಸ್ವರೂಪದ ಸಂದೇಶಗಳು ಬರುತ್ತಿವೆ ಎಂದು ತೃಣಮೂಲ ಕಾಂಗ್ರೆಸ್ನ ಮಾಜಿ ಸದಸ್ಯೆಯೂ ಆಗಿರುವ ಮಿಮಿ ಚಕ್ರವರ್ತಿ ಮಂಗಳವಾರ ಮಾಹಿತಿ ಹಂಚಿಕೊಂಡಿದ್ದಾರೆ. ಮಿಮಿ ಈ ಬಗ್ಗೆ ಕೋಲ್ಕತಾ ಪೊಲೀಸರ ಸೈಬರ್ ಸೆಲ್ ವಿಭಾಗಕ್ಕೆ ಆ ಮಾಹಿತಿಯನ್ನು ಕೊಟ್ಟಿದ್ದಾರೆ.
ನಾವು ಮಹಿಳೆಯರಿಗೆ ನ್ಯಾಯವನ್ನು ಒದಗಿಸುವ ಬಗ್ಗೆ ಮಾತನಾಡುತ್ತೆವೆ. ಆದರೆ ಪರಿಸ್ಥಿತಿ ವಿಭಿನ್ನವಾಗಿದೆ. ಕೆಲವು ವಿಷಕಾರಿ ಪುರುಷರು ಮಹಿಳೆಯರ ಪರವಾಗಿ ಜನರ ಮಧ್ಯೆ ಹೇಳುತ್ತಾರೆ. ಆದರೆ ಮುಖವಾಡ ಧರಿಸಿಕೊಂಡರು ಅತ್ಯಾಚಾರದ ಬೆದರಿಕೆಗಳನ್ನು ಹಾಕುತ್ತಾರೆ. ಅವರಿಗೆ ಶಿಕ್ಷಣದ ಕೊರತೆ ಇದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.
ಕೋಲ್ಕತ್ತಾದಲ್ಲಿ ಈ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ನಟಿ ವೈಯಕ್ತಿಕವಾಗಿ ಭಾಗವಹಿಸಿದ್ದರು. ಮಿಮಿ ಅವರಲ್ಲದೆ, ನಟರಾದ ರಿದ್ಧಿ ಸೇನ್, ಅರಿಂದಮ್ ಸಿಲ್ ಮತ್ತು ಮಧುಮಿತಾ ಸರ್ಕಾರ್ ಕೂಡ ಆಗಸ್ಟ್ 14 ರ ರಾತ್ರಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಮಿಮಿ ಚಕ್ರವರ್ತಿ ಜಾದವ್ಪುರ ಲೋಕಸಭಾ ಕ್ಷೇತ್ರದಿಂದ ಸಂಸತ್ ಸದಸ್ಯರಾಗಿದ್ದರು.