ಬಾಲಿವುಡ್ ಬೆಡಗಿ ರಾಧಿಕಾ ಆಪ್ಟೆ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ನೀಡಿದ್ದಾರೆ. ಮದುವೆಯಾದ 12 ವರ್ಷಗಳ ಬಳಿಕ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರುವ ಸಿಹಿಸುದ್ದಿ ನೀಡಿದ್ದಾರೆ. ರಾಧಿಕಾ ಆಪ್ಟೆ ಅವರು ಇತ್ತೀಚೆಗೆ ಲಂಡನ್ ಫಿಲ್ಮ್ ಫೆಸ್ಟಿವಲ್ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ವೇಳೆ, ಬೇಬಿ ಬಂಪ್ ತೋರಿಸಿದ್ದಾರೆ. ಈ ಫೋಟೋಗಳನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಮಗುವಿನ ನಿರೀಕ್ಷೆಯಲ್ಲಿರುವ ರಾಧಿಕಾಗೆ ಫ್ಯಾನ್ಸ್, ಸೆಲೆಬ್ರಿಟಿಗಳು ಶುಭಕೋರುತ್ತಿದ್ದಾರೆ.
ಅಂದಹಾಗೆ, 2012ರಲ್ಲಿ ಬ್ರಿಟಿಷ್ ಮ್ಯೂಸಿಕ್ ಡೈರೆಕ್ಟರ್ ಬೆನೆಡಿಕ್ಟ್ ಟೇಲರ್ ಅವರನ್ನು ನಟಿ ಮದುವೆಯಾದರು. ಆದರೆ ಈ ಮದುವೆಯ ಬಗ್ಗೆ ಎಲ್ಲೂ ನಟಿ ಬಹಿರಂಗವಾಗಿ ಮಾತನಾಡುತ್ತಿರಲಿಲ್ಲ. ಸದ್ಯ ನಟಿಯ ಪ್ರೆಗ್ನೆನ್ಸಿ ವಿಚಾರ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.