- ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ
- ಕಿರುತೆರೆ ನಟನ ಆಪ್ತ ಸ್ನೇಹಿತ ಸ್ಥಳದಲ್ಲೇ ಸಾವು
ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಕಿರುತೆರೆ ನಟ ವರುಣ್ ಆರಾಧ್ಯ ಅವರ ಆಪ್ತ ಸ್ನೇಹಿತ ತೇಜಸ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬ ಯುವಕನಿಗೆ ಗಂಭೀರ ಗಾಯಗಳಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ಜನಪ್ರೀಯತೆ ಪಡೆದಿದ್ದ ತೇಜಸ್ ಅವರು ಕೆಲಸದ ನಿಮಿತ್ತ ತನ್ನ ಸ್ನೇಹಿತನ ಜೊತೆ ಚಿಕ್ಕಬಳ್ಳಾಪುರಕ್ಕೆ ತೆರಳಿದ್ದರು. ಆ ವೇಳೆ ದೊಡ್ಡಬಳ್ಳಾಪುರ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಿಂದ ಸ್ಥಳದಲ್ಲೇ ತೇಜಸ್ ಅವರು ಸಾವನ್ನಪ್ಪಿದ್ದಾರೆ. ಆತನ ಹಿಂಬದಿಯಲ್ಲಿ ಕುಳಿತಿದ್ದ ತನ್ನ ಸ್ನೇಹಿತನಿಗೆ ಗಂಭೀರ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೇಜಸ್ ಅವರ ಸಾವಿನ ಸುದ್ದಿ ಕೇಳಿ ಸ್ನೇಹಿತರಿಗೆ ಹಾಗೂ ತನ್ನ ಕುಟುಂಬಸ್ಥರಿಗೆ ಭಾರೀ ಆಘಾತ ಉಂಟು ಮಾಡಿದೆ.