2024ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ.
ಮೇ 21 ಇಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಹೊರ ಬಿಳಲಿದೆ. 2024ರ ಏಪ್ರಿಲ್ 19ರಿಂದ ಮೇ 16ರವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ 2 ಅನ್ನು ನಡೆಸಲಾಗಿತ್ತು. ವರ್ಷದಿಂದಲೇ 3 ಬಾರಿ ಪರೀಕ್ಷೆ ಬರೆಯುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ.
ಇನ್ನು, ದ್ವಿತೀಯ ಪಿಯುಸಿ 2ರ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯಗೊಂಡಿದೆ. ದ್ವಿತೀಯ ಪಿಯುಸಿ 2ರ ಫಲಿತಾಂಶವನ್ನು ಇಂದು ಮಧ್ಯಾಹ್ನ 03 ಗಂಟೆಗೆ https://karresults.nic.in ವೆಬ್ಸೈಟ್ನಲ್ಲಿ ವೀಕ್ಷಣೆ ಮಾಡಬಹುದು ಎಂದು ಇಲಾಖೆ ಮಾಹಿತಿ ನೀಡಿದೆ.