ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಇನ್ಸ್ಟಾಗ್ರಾಂನಲ್ಲಿ ಫಾಲೋವರ್ಸ್ ಹೆಚ್ಚಿಸಿಕೊಂಡಿದ್ದಾರೆ. ಆ ಮೂಲಕ ಪ್ರಧಾನಿ ನರೇಂದ್ರ ಮೋದಿಯವರನ್ನು ಹಿಂದಿಕ್ಕಿ ಶ್ರದ್ಧಾ ಫಾಲೋವರ್ಸ್ ಸಂಖ್ಯೆ ಜಾಸ್ತಿ ಮಾಡಿಕೊಂಡಿದ್ದಾರೆ.
ಶ್ರದ್ಧಾ ಸದ್ಯ ಇನ್ಸ್ಟಾದಲ್ಲಿ 91.4 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ. ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ಮನ್ ಕೊಹ್ಲಿ, ಬಾಲಿವುಡ್ ಪಿಂಕಿ ಪ್ರಿಯಾಂಕಾ ಚೋಪ್ರಾ ಅವರ ಬಳಿಕ ಮೂರನೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ನಟಿಯಾಗಿ ಶ್ರದ್ಧಾ ಕಾಣಿಸಿಕೊಂಡಿದ್ದಾರೆ.
ಪ್ರಧಾನಿ ಮೋದಿ ಸದ್ಯ 91.3 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಎಕ್ಸ್ನಲ್ಲಿ 101 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಆ ಮೂಲಕ ನರೇಂದ್ರ ಮೋದಿಯವರು ಹೆಚ್ಚು ಫಾಲೋವರ್ಸ್ಗಳನ್ನು ಹೊಂದಿರುವ ಜಾಗತಿಕ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.